ಬಂಟರ ಸಂಘ ಪಡುಬಿದ್ರಿಯ ಆಶ್ರಯದಲ್ಲಿ ನೂತನವಾಗಿ ಆರಂಭಗೊಂಡ ಸಿರಿಮುಡಿ ಕ್ರೆಡಿಟ್ ಕೋ ಆಪರೇಟಿವ್ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಅವರು 5 ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಉಪಾಧ್ಯಕ್ಷರಾಗಿ ಶ್ರೀನಾಥ್ ಹೆಗ್ಡೆ ನಡ್ಸಾಲು ಗುತ್ತು ಹಾಗೂ ನಿರ್ದೇಶಕರಾಗಿ ರವೀಂದ್ರನಾಥ ಜಿ.ಹೆಗ್ಡೆ, ಎರ್ಮಾಳು ಶಶಿಧರ ಶೆಟ್ಟಿ, ಸಾಂತೂರು ಭಾಸ್ಕರ ಶೆಟ್ಟಿ, ಗುಂಡ್ಲಾಡಿ ಸುರೇಶ್ ಶೆಟ್ಟಿ, ನವೀನ್ ಚಂದ್ರ ಜೆ. ಶೆಟ್ಟಿ, ಸಂತೋಷ್ ಶೆಟ್ಟಿ ಪಲ್ಲವಿ, ಮಾಧವ ಸಿ. ಶೆಟ್ಟಿ, ಪ್ರಕಾಶ್ ಶೆಟ್ಟಿ ಪಡುಹಿತ್ಲು, ರವಿ ಶೆಟ್ಟಿ ಗುಂಡ್ಲಾಡಿ, ಸಂತೃಪ್ತಿ ಎಂ. ಶೆಟ್ಟಿ, ಶೋಭಾ ಜೆ. ಶೆಟ್ಟಿ ಆಯ್ಕೆಯಾಗಿದ್ದಾರೆ.