ಬ್ರಹ್ಮಾವರ ಸೆ. 28 ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ ಜಿ ಎಮ್ ಅಡಿಟೋರಿಯಮ್ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಕ್ಷಕ- ಶಿಕ್ಷಕ ಸಂಘದ ಅಧ್ಯಕ್ಷರಾದ ನಾಗರಾಜ ಸೋಮಯಾಜಿ ಮಾತನಾಡಿ ಗುಣಮಟ್ಟದ ಶಿಕ್ಷಣದೊಂದಿಗೆ ಸಾಧನೆಯ ಉತ್ತುಂಗದಲ್ಲಿ ರಾರಾಜಿಸುತ್ತಿರುವ ಜಿ ಎಮ್ಸಂ ಸ್ಥೆಯನ್ನು ನೋಡುವಾಗ ಹೆಮ್ಮೆಯಾಗುತ್ತದೆ. ನಾವೆಲ್ಲರೂ ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ನೀಡಬೇಕು. ಅವರು ಶಾಲೆಯಿಂದ ಮನೆಗೆ ಬಂದಾಗ ಅವರ ಜೊತೆ ಪ್ರೀತಿಯಿಂದ ಮಾತನಾಡಿ ಸಮಯವನ್ನು ಕಳೆಯಬೇಕೆಂದರು.
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಮಕ್ಕಳ ಜೀವನೋಪಾಯಕ್ಕಾಗಿ ಮಾತ್ರ ಶಿಕ್ಷಣ ಸೀಮಿತವಾಗಿರದೆ ಅವರ ಉತ್ತಮ ಜೀವನಕ್ಕಾಗಿ ಮೌಲ್ಯದ ಜೊತೆಗೆ ಜ್ಞಾನವನ್ನು ನೀಡಬೇಕೆಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಪೋಷಕರ ಪ್ರಶ್ನೆಗಳಿಗೆ ಉತ್ತರಿಸಿ ಮಾತನಾಡಿ ಶಾಲೆ ಆಯೋಜಿಸುವ ರಕ್ಷಕರ ಸಭೆಯಲ್ಲಿ ಭಾಗವಹಿಸುವುದು ಪೋಷಕರ ಆದ್ಯ ಕರ್ತವ್ಯವಾಗಿದ್ದು ಇದರಿಂದ ಮಕ್ಕಳ ಕಲಿಕೆ ಸುಗಮವಾಗಲಿದೆ ಎಂದರು. ಪೋಷಕರು ಶಾಲೆಯ ಕುರಿತು ಪ್ರಶಂಸನೀಯ ನುಡಿಗಳನ್ನಾಡಿ ಸಲಹೆ ಸೂಚನೆಗಳನ್ನು ನೀಡಿದರು.
ರಕ್ಷಕ- ಶಿಕ್ಷಕ ಸಂಘದ ನೂತನ ಅಧ್ಯಕ್ಷೆಯಾಗಿ ಡಾ. ಅನುಷಾ ಸುಬ್ರಹ್ಮಣ್ಯಂ, ಉಪಾಧ್ಯಕ್ಷೆಯಾಗಿ ಶ್ರೀಮತಿ ರೇವತಿ ಕೆ ಆಯ್ಕೆಗೊಂಡರು. ಕಾರ್ಯಕ್ರಮದಲ್ಲಿ ಪಿ ಟಿ ಎ ಉಪಾಧ್ಯಕ್ಷೆ ಪ್ರೀತಿ ಶೆಣೈ, ಶಾಲಾ ಆಡಳಿತ ಮಂಡಳಿಯ ಸದಸ್ಯೆ ತಾರಾ ಪ್ರಕಾಶ್ಚಂದ್ರ ಶೆಟ್ಟಿ, ಜಿ ಎಮ್ ಗ್ಲೋಬಲ್ ಸ್ಕೂಲ್ ನ ಪಾಂಶುಪಾಲರಾದ ಪ್ರಣವ್ ಶೆಟ್ಟಿ, ಶ್ರೀಮಾ ಪ್ರಣವ್ ಶೆಟ್ಟಿ, ಶಿಕ್ಷಕ ವೃಂದ, ಪೋಷಕರು ಹಾಗೂ ಸಹ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.