ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ (ರಿ) ಉಡುಪಿ ಜಿಲ್ಲೆ ಮತ್ತು ತಾಲೂಕು ಕಾನೂನು ಸೇವಾ ಸಮಿತಿಯು ಶಿಕ್ಷಕರ ದಿನಾಚರಣೆ ಪ್ರಯುಕ್ತ ಕೊಡ ಮಾಡುವ 2024- 25 ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೊಳಹಳ್ಳಿ ಇದರ ಸಹ ಶಿಕ್ಷಕ ಗಣೇಶ್ ಶೆಟ್ಟಿ ಭಾಜನರಾಗಿದ್ದಾರೆ.
ಇವರು ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಕುಂದಾಪುರ ವಲಯದಿಂದ ಇವರು ಆಯ್ಕೆಯಾಗಿದ್ದು, ಸೆಪ್ಟೆಂಬರ್ 29 ರಂದು ಕುಂಭಾಶಿಯ ಶ್ರೀ ವಿನಾಯಕ ಸಭಾಭವನದಲ್ಲಿ ಜಿಲ್ಲಾ ನ್ಯಾಯಾಧೀಶರಿಂದ ಪ್ರಶಸ್ತಿ ಸ್ವೀಕರಿಸಿದರು.