ಸುರತ್ಕಲ್ ಎನ್.ಐ.ಟಿ.ಕೆ ನಿವೃತ್ತ ಪ್ರಾಂಶುಪಾಲ ಡಾ| ಪಿ. ಸುಧಾಕರ ಶೆಟ್ಟಿ ಅವರ ಶ್ರದ್ಧಾಂಜಲಿ ಸಭೆಯು ಬೈಲೂರು ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಡಾ. ಸುಧೀರ್ ರಾಜ್, ಮಟ್ಟಾರ್ ರತ್ನಾಕರ್ ಹೆಗ್ಡೆ, ಪ್ರೊ.ಕೆ.ಆರ್ ಕಾಮತ್ ನುಡಿನಮನ ಸಲ್ಲಿಸಿದರು.
ಮಣಿಪಾಲ ಮಾಹೆಯ ಉಪಕುಲಪತಿ ಡಾ. ಎಚ್. ಎಸ್. ಬಲ್ಲಾಳ್, ಎಂಆರ್ ಜಿ ಗ್ರೂಪ್ ಚೇರ್ಮನ್ ಪ್ರಕಾಶ್ ಶೆಟ್ಟಿ, ಮಣಿಪಾಲ ಕೆಎಂಸಿ ಡೀನ್ ಡಾ. ಪದ್ಮರಾಜ್ ಹೆಗ್ಡೆ, ಕೆಎಂಸಿ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ಅವಿನಾಶ್ ಶೆಟ್ಟಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಎಂಎಲ್ಸಿ ಮಂಜುನಾಥ್ ಭಂಡಾರಿ, ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ, ನಾಗರಾಜ್ ಶೆಟ್ಟಿ, ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ, ಹಾಲಾಡಿ ಶ್ರೀನಿವಾಸ್ ಶೆಟ್ಟಿ, ರಘುಪತಿ ಭಟ್, ಲಾಲಾಜಿ ಮೆಂಡನ್, ಆರೆಸ್ಸೆಸ್ ಮುಖಂಡ ಶಂಭು ಶೆಟ್ಟಿ, ಬಿಜೆಪಿ ಮುಖಂಡ ಕಿದಿಯೂರು ಉದಯಕುಮಾರ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ನವೀನ್ ಚಂದ್ರ ಜೆ. ಶೆಟ್ಟಿ, ಮುನಿಯಾಲು ಉದಯ ಕುಮಾರ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ಜೆಡಿಎಸ್ ಜಿಲ್ಲಾಧ್ಯಕ್ಷ ಕಾಪು ಯೋಗೇಶ್ ಶೆಟ್ಟಿ, ಉದ್ಯಮಿಗಳಾದ ಪುರುಷೋತ್ತಮ ಶೆಟ್ಟಿ, ಮನೋಹರ್ ಎಸ್. ಶೆಟ್ಟಿ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ, ಮಣಿಪಾಲ ವೈಷ್ಣವಿ ದೇವಸ್ಥಾನದ ಮ್ಯಾನೇಜಿಂಗ್ ಟ್ರಸ್ಟಿ ಜಯರಾಜ್ ಹೆಗ್ಡೆ, ನಾಗಮಣಿ ಎಸ್. ಶೆಟ್ಟಿ, ಡಾ. ಜ್ಯೋತಿ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ, ಡಾ. ಆದಿತ್ಯ ಶೆಟ್ಟಿ, ಡಾ. ಜೀವನ್ ಶೆಟ್ಟಿ, ಅಮಿತಾ ಶೆಟ್ಟಿ, ಕೆರಮ ಮೂಡುಮನೆ ಪಡುಬಿದ್ರಿ ಮತ್ತು ನಂದಬೆಟ್ಟು ಕುಟುಂಬಿಕರು ಪುಷ್ಪನಮನ ಸಲ್ಲಿಸಿದರು.