ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ಅ. 02 ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ, ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಯನ್ನು ಮಾಡುವ ಮೂಲಕ ಗೌರವ ಸಲ್ಲಿಸಿದರು. ನಂತರ ಮಾತನಾಡಿ ಗಾಂಧೀಜಿಯವರ ಸತ್ಯ, ಅಹಿಂಸೆಯ ಸಿದ್ಧಾಂತವನ್ನು ಇಂದು ಇಡೀ ಮನುಕುಲವೇ ಅನುಸರಿಸಬೇಕಾಗಿದೆ.
ಅದೇ ರೀತಿ ಲಾಲ್ ಬಹದ್ದೂರ್ ಶಾಸ್ತ್ರೀಯವರ ಸರಳತೆ, ಪ್ರಾಮಾಣಿಕತೆ, ನಾಯಕತ್ವದ ಗುಣಗಳು ನಮಗೆಲ್ಲರಿಗೂ ಆದರ್ಶವೆಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗಮಾಡಿದ ಮಹಾನ್ ನಾಯಕರನ್ನು ನಾವು ನಿರಂತರ ಸ್ಮರಿಸಬೇಕು.
ಗಾಂಧೀ ಚಿಂತನೆಗಳೇ ನಮಗೆ ದಾರಿದೀಪ, ಅವರು ಹಚ್ಚಿದ ದೀಪದಲ್ಲಿ ನಾವು ಮುನ್ನಡೆಯೋಣವೆಂದರು. ಕಾರ್ಯಕ್ರಮದಲ್ಲಿ ಶಾಲಾ ಮ್ಯಾನೇಜರ್ ತ್ಯಾಗೀಶ್ಚಂದ್ರ ಶೆಟ್ಟಿ, ಸಂಸ್ಥೆಯ ಶಿಕ್ಷಕ ವೃಂದ, ಸಹ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.