ಮೂಡಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಕಪಿತಾನಿಯೋ ಪದವಿಪೂರ್ವ ಕಾಲೇಜು ಮಂಗಳೂರು ಜಂಟಿ ಆಶ್ರಯದಲ್ಲಿ ಮಂಗಳೂರಿನಲ್ಲಿ ಜರುಗಿದ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಮಂಗಳೂರು ತಾಲೂಕನ್ನು ಪ್ರತಿನಿಧಿಸಿದ ಕಪಿತಾನಿಯೋ ಪ.ಪೂ. ಕಾಲೇಜನ್ನು 1 ಇನ್ನಿಂಗ್ಸ್ ಹಾಗೂ 06 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.
ಬಾಲಕರ ಸೆಮಿಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಪುತ್ತೂರು ತಾಲೂಕನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜನ್ನು ಸೋಲಿಸಿ ಫೈನಲ್ಗೆ ಪ್ರವೇಶಿಸಿತ್ತು. ಬಾಲಕಿಯರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಕಡಬ ತಾಲೂಕನ್ನು ಪ್ರತಿನಿಧಿಸಿದ ಬೆಥನಿ ಪ.ಪೂ. ಕಾಲೇಜು ತಂಡವನ್ನು 1 ಇನ್ನಿಂಗ್ಸ್ ಹಾಗೂ 10 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಬಾಲಕಿಯರ ಸೆಮಿಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಮೂಲ್ಕಿ ತಾಲೂಕನ್ನು ಪ್ರತಿನಿಧಿಸಿದ ಶ್ರೀ ದುರ್ಗಾಪರಮೇಶ್ವರಿ ಪದವಿಪೂರ್ವ ಕಾಲೇಜು ಕಟೀಲನ್ನು ಸೋಲಿಸಿ ಫೈನಲ್ಗೆ ಅರ್ಹತೆ ಪಡೆದಿತ್ತು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.