ತುಳು ಕನ್ನಡ ವೆಲ್ಫೇರ್ ಅಸೋಸಿಯೇಷನ್ ಮೀರಾ ಭಯಂದರ್ ಮುಂಬಯಿ ಇದರ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಹಿರಿಯ ರಂಗಭೂಮಿ ನಿರ್ದೇಶಕ ಜಗದೀಶ್ ಶೆಟ್ಟಿ ಕೆಂಚನಕೆರೆ ಇವರನ್ನು ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರು ಗೌರವಿಸಿದರು.
ಈ ಸಂದರ್ಭದಲ್ಲಿ ಉದ್ಯಮಿ, ಸಮಾಜ ಸೇವಕ ಡಾ| ಹರೀಶ್ ಶೆಟ್ಟಿಯವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಸಭಾ ಕಾರ್ಯಕ್ರಮದ ನಂತರ ಉಲಾಯಿಡೊಂಜಿ ಪಿದಾಯಿಡೊಂಜಿ ತುಳು ನಾಟಕ ಪ್ರದರ್ಶನಗೊಂಡಿತು.