ಬೋಂಬೆ ಬಂಟ್ಸ್ ಅಸೋಸಿಯೇಷನ್ ನವಿಮುಂಬಯಿ ಜುಯಿ ನಗರದಲ್ಲಿರುವ ಬಂಟ್ಸ್ ಸೆಂಟರ್ ನ ತಳ ಮಹಡಿಯಲ್ಲಿರುವ ಲತಾ ಜಯರಾಮ ಶೆಟ್ಟಿ ಸಭಾಗೃಹ ಇದೀಗ ನವೀಕೃತಗೊಂಡು ಅಕ್ಟೋಬರ್ 19 ರಂದು ಶನಿವಾರ ಬೆಳಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ನವೀಕೃತಗೊಂಡ ಲತಾ ಜಯರಾಮ ಶೆಟ್ಟಿ ಸಭಾಗೃಹವನ್ನು ಉದ್ಯಮಿ, ಅಸೋಸಿಯೇಷನ್ ನ ಟ್ರಸ್ಟಿ ಜಯರಾಮ್ ಶೆಟ್ಟಿ ಮತ್ತು ಬಂಟರ ಸಂಘ ಮುಂಬಯಿಯ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಲತಾ ಜಯರಾಮ್ ಶೆಟ್ಟಿಯವರು ಉದ್ಘಾಟಿಸಲಿದ್ದಾರೆ. ಅಸೋಸಿಯೇಷನ್ ನ ಅಧ್ಯಕ್ಷರಾದ ಸಿಎ ಸುರೇಂದ್ರ ಕೆ. ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಬಳಿಕ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತೇಜಾಕ್ಷಿ ಶೆಟ್ಟಿಯವರ ಮುಂದಾಳತ್ವದಲ್ಲಿ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಬೆಳಗ್ಗಿನಿಂದ ಸಂಜೆಯವರೆಗೆ ನಡೆಯಲಿದೆ. ಮಧ್ಯಾಹ್ನ 2:30ಕ್ಕೆ ಅಸೋಸಿಯೇಷನ್ ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ್ ಶೆಟ್ಟಿ ಐಕಳ ಅವರ ಮುಂದಾಳತ್ವದಲ್ಲಿ ಅನಂತ ಪದ್ಮನಾಭ ಯಕ್ಷಗಾನ ಮಂಡಳಿ ಪೆರ್ಡೂರು ಮೇಳದ ಕಲಾವಿದರಿಂದ ಕಳೆದ ತಿರುಗಾಟದ ಸೂಪರ್ ಹಿಟ್ ಪ್ರಸಂಗ ಪ್ರೋ. ಪವನ್ ಕಿರಣಕೆರೆ ವಿರಚಿತ 34ನೇ ಕಲಾ ಕುಸುಮ ‘ಗಂಗೆ ತುಂಗೆ ಕಾವೇರಿ’ ಬಂಟ್ಸ್ ಸೆಂಟರ್ ನ ಶಶಿಕಲಾ ಮನಮೋಹನ ಶೆಟ್ಟಿ ಕಾಂಪ್ಲೆಕ್ಸ್ ನ ಸೌಮ್ಯ ಲತಾ ಸದಾನಂದ ಶೆಟ್ಟಿ ಆಡಿಟೋರಿಯಂ ನಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅಸೋಸಿಯೇಷನ್ ನ ಉಪಾಧ್ಯಕ್ಷ ಅಡ್ವಕೇಟ್ ಡಿ.ಕೆ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಐಕಳ ಕಿಶೋರ್ ಕೆ ಶೆಟ್ಟಿ, ಕೋಶಾಧಿಕಾರಿ ಸಿಎ ವಿಶ್ವನಾಥ್ ಶೆಟ್ಟಿ, ಜೊತೆ ಕಾರ್ಯದರ್ಶಿ ನ್ಯಾಯವಾದಿ ಗುಣಕರ ಡಿ ಶೆಟ್ಟಿ, ಜೊತೆ ಕೋಶಾಧಿಕಾರಿ ಸಿಎ ದಿವಾಕರ ಶೆಟ್ಟಿ, ಮಹಿಳಾ ವಿಭಾಗದ ಉಪಕಾರ್ಯಾಧ್ಯಕ್ಷೆ ಶಾಂತ ಎನ್. ಶೆಟ್ಟಿ, ಕಾರ್ಯದರ್ಶಿ ಸಹಾನಿ ವಿ. ಶೆಟ್ಟಿ, ಕೋಶಾಧಿಕಾರಿ ಉಷಾ ಆರ್. ಶೆಟ್ಟಿ, ಜೊತೆ ಕಾರ್ಯದರ್ಶಿ ಲಲಿತ ಬಿ ಶೆಟ್ಟಿ, ಜೊತೆ ಕೋಶಾಧಿಕಾರಿ ಮಾಯಾ ಎಸ್ ಆಳ್ವ, ಯುವ ವಿಭಾಗದ ಕಾರ್ಯಾಧ್ಯಕ್ಷೆ ದೃಶ್ಯ ಶೆಟ್ಟಿ ಅವರು ವಿನಂತಿಸಿದ್ದಾರೆ.