ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯು ರಾಷ್ಟ್ರೀಯ ಮಿಲಿಟರಿ ಶಾಲೆಯ ಪ್ರವೇಶ ಪರೀಕ್ಷೆ (RMS)ಗೆ ಪೂರ್ವಭಾವಿಯಾಗಿ ತರಬೇತಿಯನ್ನು ಪ್ರಾರಂಭಿಸಲಿದ್ದು, ಈಗಾಗಲೆ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ ಸೈನಿಕ ಶಾಲಾ ಪ್ರವೇಶ ಪರೀಕ್ಷೆ ಸೇರಿದಂತೆ ವಿವಿಧ ವಸತಿಯುಕ್ತ ಶಾಲೆಗಳ ಪ್ರವೇಶ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಿ ಸಂಸ್ಥೆಯ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಯಲ್ಲಿ ಆಯ್ಕೆಗೊಂಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
ರಾಷ್ಟ್ರೀಯ ಮಿಲಿಟರಿ ಶಾಲೆ (RMS) ಪರೀಕ್ಷೆಯ ತರಬೇತಿ ತರಗತಿಗಳು ವಾರದಲ್ಲಿ 5 ದಿನ ರಾತ್ರಿ ಗಂಟೆ 8.00ರಿಂದ 9.00 ರ ವರೆಗೆ ಆನ್ಲೈನ್ ಮೂಲಕ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ವಿದ್ಯಾಮಾತಾ ಅಕಾಡೆಮಿಯ ಈ ತರಗತಿಗಳ ಸದುಪಯೋಗಪಡಿಸಿಕೊಳ್ಳಲು ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಿ ದಾಖಲಾತಿಯನ್ನು ಪಡೆಕೊಳ್ಳಬಹುದು.
ದಾಖಲಾತಿ ಪಡೆದುಕೊಳ್ಳಲು ಮತ್ತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :- 9148935808, 9448527606, 96204 68869