ಮಂದಾರ್ತಿ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಂಭ್ರಮದ ಅಂಗವಾಗಿ ಶತಸಾರ್ಥಕ್ಯ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷ ಗಂಗಾಧರ ಶೆಟ್ಟಿ, ಆಶಾ ಜಿ. ಶೆಟ್ಟಿ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ, ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಜಯಕರ್ ಶೆಟ್ಟಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಎಚ್. ಧನಂಜಯ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ನಿರ್ದೇಶಕ ಡಾ. ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಹಿರಿಯಡ್ಕ ರೈತರ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ, ಇನ್ನಂಜೆ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ರಾಜೇಶ್ ರಾವ್, ಹೆಗ್ಗುಂಜೆ ಗ್ರಾಪಂ ಅಧ್ಯಕ್ಷ ರಾಮಕೃಷ್ಣ, ಕಾಡೂರು ಗ್ರಾಪಂ ಅಧ್ಯಕ್ಷ ಜಲಂಧರ ಶೆಟ್ಟಿ, ಬಿಲ್ಲಾಡಿ ಗ್ರಾಪಂ ಅಧ್ಯಕ್ಷೆ ಶಾರದಾ ಉಪಸ್ಥಿತರಿದ್ದರು.