ಬ್ರಹ್ಮಾವರ ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ನವೆಂಬರ್ 9ರಂದು 10:35 ಕ್ಕೆ ಬಂಟರ ಭವನದಲ್ಲಿ ಜರಗಲಿದೆ. ಸಂಘದ ನೂತನ ಅಧ್ಯಕ್ಷ ಎಚ್. ಸುದರ್ಶನ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದು, ಮಣಿಪಾಲ ಮಾಹೆ ಸಹ ಕುಲಾಧಿಪತಿ ಡಾ. ಎಚ್. ಎಸ್ ಬಳ್ಳಾಲ್ ಉದ್ಘಾಟನೆ ನೆರವೇರಿಸುವರು.
ಮನೆ ಕೊಡುಗೆಯ ಫಲಾನುಭವಿಗೆ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮಂಜೂರಾತಿ ಪತ್ರ ಹಸ್ತಾಂತರಿಸಲಿದ್ದು, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ ಅವರು ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಯ ದತ್ತು ಸ್ವೀಕಾರವನ್ನು ನಡೆಸಿ ಕೊಡುವರು. ಸಂಘದ ಮಾಜಿ ಅಧ್ಯಕ್ಷರಾದ ಎಚ್. ವಿಠಲ ಶೆಟ್ಟಿ ಶೇಡಿಕೊಡ್ಲು, ಕೆ. ಬಾಲಕೃಷ್ಣ ಹೆಗ್ಡೆ ಅವರು ಪ್ರತಿಭಾ ಪುರಸ್ಕಾರವನ್ನು ನೆರವೇರಿಸುವರು.
ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಅಧ್ಯಕ್ಷ ಶ್ರೀನಾಥ ಹೆಗ್ಡೆ, ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ತಾಲೂಕು ಸಮಿತಿ ಸಂಚಾಲಕ ಶಿವಪ್ರಸಾದ್ ಹೆಗ್ಡೆ, ಬ್ರಹ್ಮಾವರ ಬಂಟರ ಭವನದ ಸಂಚಾಲಕ ಬಿ. ಭುಜಂಗ ಶೆಟ್ಟಿ ಅತಿಥಿಗಳಾಗಿರುವರು. ಸಂಘದ ಮಾಜಿ ಅಧ್ಯಕ್ಷ ಬಿ. ರಾಜಾರಾಮ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷ ಮೈರ್ಮಾಡಿ ಸುಧಾಕರ ಶೆಟ್ಟಿ, ನಿಕಟಪೂರ್ವ ಕಾರ್ಯದರ್ಶಿ ಬೈಕಾಡಿ ಸುಪ್ರಸಾದ ಶೆಟ್ಟಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.