ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಮಂದಾರ್ತಿ ಸೇವಾ ಸಹಕಾರಿ ಸಂಘ ಹಾಗೂ ಸಹಕಾರ ಇಲಾಖೆ ಆಶ್ರಯದಲ್ಲಿ 71 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭದ ಅಂಗವಾಗಿ ಸಹಕಾರ ಸಚಿವಾಲಯದ ನೂತನ ಪ್ರಯತ್ನಗಳ ಮೂಲಕ ಸಹಕಾರ ಚಳುವಳಿಯನ್ನು ಬಲಪಡಿಸುವ ಕಾರ್ಯಕ್ರಮ ನವೆಂಬರ್ 14 ರಂದು ಪೂರ್ವಾಹ್ನ 10:30ಕ್ಕೆ ಮಂದಾರ್ತಿ ಶ್ರೀ ದುರ್ಗಾ ಸಹಕಾರ ಸೌಧದ ಶ್ರೀ ಚಾಮುಂಡೇಶ್ವರಿ ಸಭಾಂಗಣದಲ್ಲಿ ಜರಗಲಿದೆ.
ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಲಿದ್ದು, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಎಚ್. ಧನಂಜಯ ಶೆಟ್ಟಿ ಮಂದಾರ್ತಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್. ಗಂಗಾಧರ ಶೆಟ್ಟಿ, ಸಹಕಾರ ಸಂಘಗಳ ಉಪನಿಬಂಧಕಿ ಕೆ. ಆರ್. ಲಾವಣ್ಯ, ಸಹಾಯಕ ನಿಬಂಧಕಿ ಸುಕನ್ಯಾ ಉಪಸ್ಥಿತರಿರುವರು. ಉಡುಪಿ ಎಂ.ಜಿ.ಎಂ ಕಾಲೇಜಿನ ನಿವೃತ್ತ ರಾಜ್ಯ ಶಾಸ್ತ್ರ ಮುಖ್ಯಸ್ಥ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.