ಸಮಾಜ ಸೇವಕ, ಹೇರಂಭ ಗ್ರೂಪ್ ಆಫ್ ಕಂಪನಿಯ ಆಡಳಿತ ನಿರ್ದೇಶಕರು, ಕರ್ನಾಟಕ ಸರಕಾರದಿಂದ ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತ ಕನ್ಯಾನ ಸದಾಶಿವ ಶೆಟ್ಟಿ ಅವರನ್ನು ಪಟ್ಲ ಫೌಂಡೇಶನ್ ಟ್ರಸ್ಟ್ ಆಶ್ರಯದಲ್ಲಿನ ನವಂಬರ್ 16ರಂದು ನಡೆದ ಸನ್ಮಾನ ಸಮಾರಂಭದಲ್ಲಿ ಬಂಟರ ಸಂಘ ಪುತ್ತೂರು ತಾಲೂಕು ವತಿಯಿಂದ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಅನಿತಾ ಹೇಮನಾಥ ಶೆಟ್ಟಿ, ದಯಾನಂದ ರೈ ಮನವಳಿಕೆ ಗುತ್ತು, ನಿತ್ಯಾನಂದ ಶೆಟ್ಟಿ ಮನವಳಿಕೆ, ರವಿಪ್ರಸಾದ್ ಶೆಟ್ಟಿ ಬನ್ನೂರು, ಲಕ್ಷ್ಮೀನಾರಾಯಣ ರೈ ಹರೇಕಲ, ಸಂತೋಷ್ ಶೆಟ್ಟಿ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.