ಮಂಗಳೂರಿನಲ್ಲಿ ನಡೆದ 71ನೇ ಅಖಿಲ ಭಾರತ ಸಪ್ತಾಹ ರಾಜ್ಯಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಉತ್ತಮ ಸಹಕಾರ ಸಂಘಗಳಿಗೆ ನೀಡುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ ‘ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ’ಯಿಂದ ಪುರಸ್ಕೃತಗೊಂಡಿದೆ. ಸಹಕಾರ ಸಚಿವ ಕೆ. ಎನ್. ರಾಜಣ್ಣ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ಜಿ. ಟಿ. ದೇವೇಗೌಡ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅನನ್ಯ ಸೇವೆಗಾಗಿ 2024 ನೇ ಸಾಲಿನ ‘ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷ ಎಸ್ ಜಯರಾಮ್ ಶೆಟ್ಟಿ ಅವರಿಗೆ ನೀಡಿ ಗೌರವಿಸಿದರು.
ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಕಳೆದ 20 ವರ್ಷಗಳಿಂದ ಸುಮಾರು 19 ಶಾಖೆಗಳನ್ನು ಹೊಂದಿದೆ. ಪ್ರಸಕ್ತ ವರ್ಷದಲ್ಲಿ ಸಂಘವು ರೂ 720 ಕೋಟಿ ವ್ಯವಹಾರ ನಡೆಸಿ ರೂಪಾಯಿ 2.50 ಕೋಟಿ ಲಾಭ ಗಳಿಸಿದೆ. ಕಾರ್ಯಕ್ರಮದಲ್ಲಿ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಭರತ್ ಶೆಟ್ಟಿ ವೈ, ಯಶ್ಪಾಲ್ ಸುವರ್ಣ, ಮೇಯರ್ ಮನೋಜ್ ಕುಮಾರ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ಕೆ. ಪಿ. ಸುಚರಿತ ಶೆಟ್ಟಿ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಮತ್ತಿತರು ಇದ್ದರು
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎಂ.ಜಿ ಶೆಟ್ಟಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ, ನಿರ್ದೇಶಕರಾದ ರಘುರಾಮಶೆಟ್ಟಿ, ಜಯಂತ್ ಶೆಟ್ಟಿ, ಸೀತಾರಾಮ ಶೆಟ್ಟಿ, ಬಾಲಕೃಷ್ಣ ಪೂಂಜ, ಜಯರಾಮ ಭಂಡಾರಿ, ಅಂಬಾ ಬಿ ಆಳ್ವ ಮೊದಲಾದವರು ಉಪಸ್ಥಿತರಿದ್ದರು.