ಮಂಗಳೂರಿನಲ್ಲಿ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯು.ಆರ್. ಶೆಟ್ಟಿ ಅವರಿಗೆ ಕರ್ನಾಟಕ ಮುಕುಟಮಣಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸಾಲಿಗ್ರಾಮ ಗಣೇಶ್ ಶೆಣೈ ಅವರ ನೇತೃತ್ವದ ಕಲಾ ಕುಂಚ ದಾವಣಗೆರೆ ಇವರು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದಾವಣಗೆರೆಯ ಚೆನ್ನಗಿರಿ ವಿರೂಪಾಕ್ಷಪ್ಪ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯು.ಆರ್. ಶೆಟ್ಟಿಯವರು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ವಿವಿಧ ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿರುವ ಇವರು ನಾಟಕ ಕಲಾವಿದರಾಗಿ ಜನಪ್ರಿಯರಾಗಿದ್ದಾರೆ. ಇವರ ನೇತೃತ್ವದ ನಾಟಕ ತಂಡ ಸರಕಾರಿ ನೌಕರರ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಇವರ ಸಮಾಜಮುಖಿ ಸೇವೆ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಇವರು ನೀಡಿದ ಕೊಡುಗೆಯನ್ನು ಪರಿಗಣಿಸಿ ದಾವಣಗೆರೆಯ ಕಲಾ ಕುಂಚ ಸಂಸ್ಥೆ ಇವರಿಗೆ ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.