ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಅವರ ಸಹಕಾರದೊಂದಿಗೆ ರೂ. 3.00 ಕೋಟಿ ವೆಚ್ಚದಲ್ಲಿ ಅಭಿವೃದ್ದಿ ಪಡಿಸಿದ ಬ್ರಹ್ಮಾವರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ “ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್” ನಾಮಕರಣ ಮತ್ತು ಲೋಕಾರ್ಪಣೆ ಕಾರ್ಯಕ್ರಮವು ಡಿಸೆಂಬರ್ 12 ರಂದು ನಡೆಯಿತು. ನೂತನವಾಗಿ ನಿರ್ಮಿಸಲಾದ ಕಟ್ಟಡವನ್ನು ಅಂತರಾಷ್ಟ್ರೀಯ ಮಟ್ಟದ ಶಿಕ್ಷಣ ತಜ್ಞರು, ಪ್ರೇರಣಾತ್ಮಕ ಉಪನ್ಯಾಸಕರಾದ ಡಾ. ಗುರುರಾಜ್ ಖರ್ಜಗಿಯವರು ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು ಇದರ ಅಧ್ಯಕ್ಷರಾದ ಡಾ| ಹೆಚ್.ಎಸ್. ಶೆಟ್ಟಿ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರ ಶಾಸಕರಾದ ಯಶ್ಪಾಲ್ ಸುವರ್ಣ, ಮಾಜಿ ಶಾಸಕ ಕೆ ರಘುಪತಿ ಭಟ್, ಶಾಲಾ ಶಿಕ್ಷಣ ಮತ್ತು ಪ್ರೌಢಶಾಲಾ ಇಲಾಖೆ ಉಪ ನಿರ್ದೇಶಕರಾದ ಕೆ. ಗಣಪತಿ, ಉಡುಪಿ ಜಿಲ್ಲಾ ಪದವಿ ಪೂರ್ವ ವಿಭಾಗದ ಉಪ ನಿರ್ದೇಶಕರಾದ ಮಾರುತಿ, ವಾರಂಬಳ್ಳಿ ಪಂಚಾಯತ್ ಅಧ್ಯಕ್ಷರಾದ ಬಿ.ಆರ್ ನಿತ್ಯಾನಂದ, ಮೋಹನ್ ಶೆಟ್ಟಿ, ರವೀಂದ್ರ ಉಪಾಧ್ಯಾಯ ಹಾಗೂ ಗಣ್ಯರು ಉಪಸ್ಥಿತರಿದ್ದರು.