ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. ಇನ್ನು ಮೂರನೇ ಹಂತದ ಚಿತ್ರೀಕರಣ ಜನವರಿಯಲ್ಲಿ ನಡೆಯಲಿದೆ. ‘ಜೈ’ ಸಿನೆಮಾ ತುಳುವಿನಲ್ಲಿ ಬಿಗ್ ಬಜೆಟ್ ನ ಸಿನಿಮಾ ಆಗಿದ್ದು, ಮಂಗಳೂರನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಮುಖ್ಯವಾಗಿ ಕುತ್ತಾರ್, ದಂಬೇಲ್, ಮರಕಡ, ಶೂಲಿನ್ ಪ್ಯಾಲೇಸ್ ಮರವೂರು, ಬೋಂದೆಲ್, ಪಣಂಬೂರು, ಬೈಕಂಪಾಡಿಯಲ್ಲಿ ಚಿತ್ರೀಕರಣ ನಡೆದಿದೆ. ಜಿಲ್ಲೆಯ ಖ್ಯಾತನಾಮ ಕಲಾವಿದರು ಸಿನಿಮಾದಲ್ಲಿದ್ದಾರೆ.ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಬಿಗ್ ಬಜೆಟ್ ನ ಸಿನೆಮಾಕ್ಕೆ ಕೈ ಹಾಕಿದ್ದಾರೆ. ಜೈ ಸಿನಿಮಾ ಆರ್ ಎಸ್ ಸಿನೆಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ.
ರೂಪೇಶ್ ಶೆಟ್ಟಿ ಸಿನೆಮಾದ ನಿರ್ದೇಶಕರಾಗಿದ್ದು, ಕತೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಕೆಮರಾ ವಿನುತ್ ಕೆ., ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ್ಹಾ, ಸಂಕಲನ ರಾಹುಲ್ ವಸಿಷ್ಠ, ನಿರ್ಮಾಪಕರು ಅನಿಲ್ ಶೆಟ್ಟಿ ಸುಧಾಕರ ಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ, ಸಹ ನಿರ್ಮಾಪಕರು ದೀಕ್ಷಿತ್ ಆಳ್ವ, ನೃತ್ಯ ಹಾಗೂ ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ನವೀನ್ ಶೆಟ್ಟಿ ಆರ್ಯನ್ಸ್, ಜೈ ಸಿನೆಮಾದಲ್ಲಿ ದೇವದಾಸ್ ಕಾಪಿಕಾಡ್, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರು ಮೊದಲಾದವರು ಅಭಿನಯಿಸಿದ್ದಾರೆ. ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸುತ್ತಿದ್ದಾರೆ.ಸಿನೆಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಯಲಿದೆ. ಮೂರನೇ ಹಂತದ ಚಿತ್ರೀಕರಣ ಜನವರಿಯಲ್ಲಿ ನಡೆಯಲಿದೆ. ಎಂದು ನಟ, ನಿರ್ದೇಶಕ ರೂಪೇಶ್ ಶೆಟ್ಟಿ ತಿಳಿಸಿದ್ದಾರೆ..