ಡಿಸೆಂಬರ್ 21 ರಂದು ಪುತ್ತೂರಿಗೆ ಸರಕಾರಿ ಕಾರ್ಯಕ್ರಮದ ಪ್ರಯುಕ್ತ ಆಗಮಿಸಿದ ಕರ್ನಾಟಕ ಸರಕಾರದ ಆರೋಗ್ಯ ಸಚಿವ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಧ್ಯಾಹ್ನದ ಭೋಜನಕ್ಕಾಗಿ ಪ್ರವಾಸಿ ಬಂಗಲೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಂಚಾಲಕ ಕಾವು ಹೇಮನಾಥ್ ಶೆಟ್ಟಿಯವರಿಗೆ ಶಾಲು ಹೊದಿಸಿ, ಮಾಲಾರ್ಪಣೆ ಮಾಡಿ ಪೇಟ ತೊಡಿಸಿ, ಹೂಗುಚ್ಚ ನೀಡಿ 60 ನೇ ಹುಟ್ಟುಹಬ್ಬಕ್ಕೆ ಶುಭಾಶಯಗಳನ್ನು ಕೋರಿದರು. ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಸಾಥ್ ನೀಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ, ಇಸಾಕ್ ಸಾಲ್ಮರ, ರಂಜಿತ್ ಬಂಗೇರ ಮತ್ತಿತರರು ಜೊತೆಗಿದ್ದರು.