ಪಡುಬಿದ್ರೆ ಬಂಟರ ಸಂಘ ಮತ್ತು ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಪಡುಬಿದ್ರೆಯಲ್ಲಿ ದಿವಂಗತ ರಮೇಶ್ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ ಅಂತಾರಾಜ್ಯ ಬಂಟ ಕ್ರೀಡೋತ್ಸವದಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡ ಹಗ್ಗಜಗ್ಗಾಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಸೆಮಿಫೈನಲ್ ನಲ್ಲಿ ಬಂಟ್ವಾಳ ತಂಡದ ಎದುರು ಜಯ ಸಾಧಿಸಿದ ಸುರತ್ಕಲ್ ತಂಡ ಫೈನಲ್ ನಲ್ಲಿ ಮಂಜೇಶ್ವರ ತಂಡವನ್ನು 2-0 ಅಂತರದಿಂದ ಸೋಲಿಸಿ ಪ್ರಶಸ್ತಿ ಜಯಿಸಿತು.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಡುಬಿದ್ರೆ ಬಂಟರ ಸಂಘದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಮುನಿಯಾಲು ಉದಯಕುಮಾರ್ ಶೆಟ್ಟಿ ಪ್ರಶಸ್ತಿ ಹಸ್ತಾಂತರಿಸಿದರು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು, ಕ್ರೀಡಾ ಕಾರ್ಯದರ್ಶಿಗಳಾದ ಶಿಶಿರ್ ಶೆಟ್ಟಿ, ಬಬಿತಾ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿಯು 75 ಸಾವಿರ ನಗದು ಮತ್ತು ಪ್ರಶಸ್ತಿಯನ್ನು ಒಳಗೊಂಡಿತ್ತು.

ಬಬಿತಾ, ಅಕ್ಷತಾ, ಮಂದಾರ್ತಿ, ಶಿಲ್ಪಾ, ಧನ್ಯ, ನವ್ಯ, ಪ್ರತೀಕ್ಷಾ, ದೀಕ್ಷಾ, ಭಾರತಿ, ಮಮತಾ, ಪ್ರವ್ಯ ತಂಡವನ್ನು ಪ್ರತಿನಿಧಿಸಿದ್ದರು. ತರಬೇತುದಾರರಾದ ನಿನಾದ್ ಜಯರಾಮ್ ಶೆಟ್ಟಿ, ವಿಕ್ರಂ ಮಾಡ ಉಪಸ್ಥಿತರಿದ್ದರು.








































































































