ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ನೂತನ ಅಧ್ಯಕ್ಷರಾಗಿ ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ರತ್ನಾಕರ ಶೆಟ್ಟಿ ನಡಿಕೆರೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಡಳಿತ ಅಧಿಕಾರಿ ಮತ್ತು ದತ್ತಿ ಇಲಾಖೆ ಆಯುಕ್ತ ಪ್ರಶಾಂತ್ ಕುಮಾರ್ ಶೆಟ್ಟಿ ಮತ್ತು ಕಾರ್ಯ ನಿರ್ವಹಣಾಧಿಕಾರಿ ರವಿ ಕಿರಣ್ ಉಪಸ್ಥಿತಿಯಲ್ಲಿ ನೂತನ ವ್ಯವಸ್ಥಾಪನ ಸಮಿತಿ ಸದಸ್ಯರ ಸಭೆಯಲ್ಲಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
ರತ್ನಾಕರ ಶೆಟ್ಟಿ ನಡಿಕೆರೆ ಅವರು ಹೊಸ ಮಾರಿಗುಡಿ ದೇವಸ್ಥಾನದ ಮೊಕ್ತೇಸರರಾಗಿ, ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.