ಬಂಟ್ಸ್ ವೆಲ್ಫೇರ್ ಟ್ರಸ್ಟ್ ಹಾಗೂ ಪಡುಬಿದ್ರಿ ಬಂಟರ ಸಂಘದ ವತಿಯಿಂದ ಜರಗಿದ ಅಂತರ್ ರಾಜ್ಯ ಮಟ್ಟದ ಬಂಟರ ಕ್ರೀಡಾಕೂಟದಲ್ಲಿ ಗುರುಪುರ ಬಂಟರ ಮಾತೃ ಸಂಘವು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಹಾಗೂ ಕಬಡ್ಡಿ ಪಂದ್ಯಾಟದಲ್ಲಿ ತೃತೀಯ ಸ್ಥಾನವನ್ನು ಪಡೆದು ಅವಳಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ವಾಲಿಬಾಲ್ ಪಂದ್ಯಾಟದಲ್ಲಿ ಗುರುಪುರ ಬಂಟರ ಮಾತೃ ಸಂಘದ ಅನೀಶ್ ರೈ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಪಡೆದರು.
ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು, ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ಮುನಿಯಾಲ್, ಚಂದ್ರಹಾಸ್ ಶೆಟ್ಟಿ ರಂಗೋಲಿ, ಮನೋಹರ್ ಎಸ್ ಶೆಟ್ಟಿ ಸಾಯಿರಾಧ ಹಾಗೂ ಪಡುಬಿದ್ರಿ ಬಂಟರ ಸಂಘದ ಪದಾಧಿಕಾರಿಗಳು ಗುರುಪುರ ಬಂಟರ ಮಾತೃ ಸಂಘಕ್ಕೆ ಟ್ರೋಫಿ ಹಾಗೂ ನಗದನ್ನು ವಿತರಿಸಿದರು. ಈ ಸಂಧರ್ಭ ಸಂಘದ ಆಟಗಾರರ ಜೊತೆಗೆ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ, ಮಾಜಿ ಸಂಚಾಲಕ ಸುದರ್ಶನ್ ಶೆಟ್ಟಿ ಪೆರ್ಮಂಕಿ, ಯುವ ವಿಭಾಗದ ಅಧ್ಯಕ್ಷ ಸಂದೀಪ್ ಆಳ್ವ ಕೊಳವೂರು, ಮಾಜಿ ಅಧ್ಯಕ್ಷ ರಾಜಕುಮಾರ ಶೆಟ್ಟಿ ತಿರುವೈಲು ಗುತ್ತು, ಯಶ್ ಆಳ್ವ ಕಾರಮೊಗರುಗುತ್ತು, ಶಿವರಾಜ್ ಶೆಟ್ಟಿ ಶೆಡ್ಡೆ, ಉಮಾಶಂಕರ್ ಸುಲಾಯ, ಮಹಿಳಾ ವಿಭಾಗದ ಅಧ್ಯಕ್ಷೆ ಇಂದಿರಾಕ್ಷಿ ಶೆಟ್ಟಿ, ಜಯ ಸುಲಾಯ ಹಾಗೂ ಸಂಘದ ಇತರ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ವಿಜಯಗಳಿಸಿದ ತಂಡವನ್ನು ಅಭಿನಂದಿಸಿದರು.