ಕುಕ್ಕೆ ಸುಬ್ರಹ್ಮಣ್ಯ ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎರಡನೆ ಎ ದರ್ಜೆಯ ದೇವಸ್ಥಾನವಾದ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಹೇಮಂತ್ ರೈ ಮನವಳಿಕೆಗುತ್ತು ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕರಾಗಿರುವ ಹೇಮಂತ್ ರೈ ಅವರು ಬೆಂಗಳೂರಿನಲ್ಲಿ ನ್ಯಾಯವಾದಿಯಾಗಿ, ಉದ್ಯಮಿಯಾಗಿ, ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದಾರೆ.