ಡಾ| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಡಾ| ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಮತ್ತು ಕೋಟತಟ್ಟು ಗ್ರಾಮ ಪಂಚಾಯತ್ 2024ನೇ ಸಾಲಿನ ಡಾ| ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಪುತ್ತೂರಿನ ಬಹುಮುಖ ಪ್ರತಿಭೆ, ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಜ್ಞಾನ ರೈ ಆಯ್ಕೆಯಾಗಿದ್ದಾರೆ.
ಈ ಬಾರಿಯ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆಯಾಗಿರುವ ಬಹುಮುಖ ಪ್ರತಿಭೆ ಜ್ಞಾನ ರೈಯವರು ಕುರಿಯ ಗ್ರಾಮದ ಉದ್ಯಮಿ ಜಯರಾಮ್ ರೈ ಹಾಗೂ ಸುದ್ದಿ ನ್ಯೂಸ್ ಚಾನಲ್ ನ ನಿರೂಪಕಿ ಹೇಮಾ ಜಯರಾಮ್ ರೈಯವರ ಪುತ್ರಿ.