ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇರುವುದೇ ಬಡವರ ಕಣ್ಣೀರು ಒರೆಸುವುದಕ್ಕೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವ ಒಕ್ಕೂಟ ನಿರಂತರವಾಗಿ ಬಡವರಿಗೆ, ಕಷ್ಟದಲ್ಲಿ ಇರುವವರಿಗೆ ನೆರವು ನೀಡುತ್ತಾ ಬಂದಿದೆ. ಮುಂದೆಯೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಧ್ವನಿಯಾಗಿ ಕೆಲಸ ಮಾಡುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು. ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಸಮಾಜ ಕಲ್ಯಾಣ ಸಹಾಯಹಸ್ತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಂಟ ಸಮಾಜ ಎಲ್ಲರನ್ನೂ ಒಗ್ಗೂಡಿಸಿ ಕಾರ್ಯಪ್ರವೃತ್ತವಾಗುತ್ತದೆ. ಅದೇ ರೀತಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇತರೆ ಸಮಾಜದವರಿಗೂ ನೆರವಿನ ಹಸ್ತ ನೀಡುತ್ತಿದೆ ಎಂದರು.ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಪ್ರಾಸ್ತಾವಿಕವಾಗಿ ಮಾತನಾಡಿ, 37 ವರ್ಷಗಳ ಇತಿಹಾಸ ಇರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಹಲವು ಕಾರ್ಯಗಳು ನಿರಂತರವಾಗಿ ನಡೆದಿದೆ. ದಾನಿಗಳ ನೆರವಿನಿಂದ ಮತ್ತು ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳ ಶ್ರಮದಿಂದ ಸಹಾಯಹಸ್ತ ನೀಡಲು ಸಾಧ್ಯವಾಯಿತು. ಈ ಬಾರಿ 16 ಲಕ್ಷ ರೂಪಾಯಿ ಹಣವನ್ನು ವಿತರಿಸಲಾಗುತ್ತಿದೆ ಎಂದರು. ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಮಾತನಾಡಿ, ಒಕ್ಕೂಟಕ್ಕೆ ಯಾರೇ ಅರ್ಜಿ ಸಲ್ಲಿಸಿದರೂ ಅರ್ಜಿಯನ್ನು ತಿರಸ್ಕರಿಸದೆ ಪರಿಶೀಲಿಸಿ ನೆರವನ್ನು ನೀಡಿದೆ ಎಂದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಆಸ್ಟ್ರೇಲಿಯದ ಉದ್ಯಮಿ ಹಾಗೂ ಒಕ್ಕೂಟದ ಪೋಷಕ ಸದಸ್ಯರಾದ ದಯಾನಂದ ಶೆಟ್ಟಿ ಆಜ್ರಿ ತಗ್ಗುಂಜೆ ಇವರನ್ನು ಸಮಾರಂಭದಲ್ಲಿ ಗೌರವಿಸಲಾಯಿತು ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆಗೈದ ಡಾ. ಅವಿನ್ ಆಳ್ವರವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪೋಷಕ ಸದಸ್ಯರಾದ ಸುಧಾಕರ್ ಪೂಂಜ, ಅಕ್ಕುಂಜೆ ಸತೀಶ್ಚಂದ್ರ ಶೆಟ್ಟಿ, ಲೋಕಯ್ಯ ಶೆಟ್ಟಿ ಅಧ್ಯಕ್ಷರು ಬಂಟರ ಸಂಘ ಸುರತ್ಕಲ್, ಹರ್ಷ ಕುಮಾರ್ ರೈ ಮಾಡಾವು ಅಧ್ಯಕ್ಷರು ಯುವ ಬಂಟರ ಸಂಘ ಪುತ್ತೂರು, ಶ್ರೀಮತಿ ಗೀತಾ ಮೋಹನ್ ರೈ ಅಧ್ಯಕ್ಷರು ಪುತ್ತೂರು ತಾಲೂಕು ಮಹಿಳಾ ಬಂಟರ ಸಂಘ, ಸತ್ಯಪ್ರಸಾದ್ ಶೆಟ್ಟಿ ಅಧ್ಯಕ್ಷರು ಜಪ್ಪಿನಮೊಗರು ಬಂಟರ ಸಂಘ, ಸಂತೋಷ್ ಶೆಟ್ಟಿ ಶೆಡ್ಡೆ ಅಧ್ಯಕ್ಷರು ಗುರುಪುರ ಬಂಟರ ಮಾತೃ ಸಂಘ, ಸಾಲೆತ್ತೂರು ಬಂಟರ ಸಂಘದ ಅಮರೇಶ್ ಶೆಟ್ಟಿ ತಿರುವಾಜೆ, ಅರವಿಂದ್ ರೈ ಮೂರ್ಜೆಬೆಟ್ಟು, ಒಕ್ಕೂಟದ ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಸುದರ್ಶನ್ ಶೆಟ್ಟಿ ಗುರುಪುರ, ಲೀಲಾಧರ್ ಶೆಟ್ಟಿ ಸುರತ್ಕಲ್, ಪ್ರವೀಣ್ ಶೆಟ್ಟಿ ಸುರತ್ಕಲ್, ಉಲ್ಲಾಸ್ ಆರ್. ಶೆಟ್ಟಿ, ಅಜಿತ್ ಕುಮಾರ್ ಶೆಟ್ಟಿ, ಮೋಹನ್ ರೈ ಪುತ್ತೂರು, ಪ್ರಜ್ವಲ್ ರೈ ಸೊರಕೆ ಪುತ್ತೂರು, ಶ್ರೀಮತಿ ಕುಸುಮ ಶೆಟ್ಟಿ ಪುತ್ತೂರು, ಜಗನ್ನಾಥ್ ಶೆಟ್ಟಿ ಬಾಳ, ಪುಷ್ಪರಾಜ್ ಶೆಟ್ಟಿ ಕುಡಂಬೂರು, ರವಿರಾಜ್ ಶೆಟ್ಟಿ ಜತ್ತಬೆಟ್ಟು, ಕಿಶೋರ್ ಶೆಟ್ಟಿ ದೆಪ್ಪುಣಿಗುತ್ತು, ಪಲಾನುಭವಿಗಳು, ಮಾಧ್ಯಮ ಮಿತ್ರರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಉದಯಕುಮಾರ್ ರೈ ಅಗರಿ ಪ್ರಾರ್ಥನೆಗೈದರು. ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿಯವರು ಕಾರ್ಯಕ್ರಮ ನಿರ್ವಹಿಸಿದರು. ಜೊತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿಯವರು ವಂದಿಸಿದರು.
