ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳದಲ್ಲಿ 03-01-2025 ರಂದು ಕ್ರಿಯೇಟಿವ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು. ಉದ್ಘಾಟಕರಾಗಿ ಆಗಮಿಸಿದ ಶ್ರೀ ಗೋಪಾಲಕೃಷ್ಣ ಸಾಮಗ ಬಿ, ಉಪಪ್ರಧಾನ ವ್ಯವಸ್ಥಾಪಕರು, ಮಾನವ ಸಂಪನ್ಮೂಲ ಇಲಾಖೆ, ಕರ್ಣಾಟಕ ಬ್ಯಾಂಕ್, ಪ್ರಧಾನ ಕಚೇರಿ, ಮಂಗಳೂರು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಜ್ಞಾನಾರ್ಜನೆಯ ಜೊತೆಗೆ ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿಯನ್ನು ರೂಢಿಸಿ ಕೊಂಡಾಗ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದರು.ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ ಎಸ್ ರವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಾಗಿಬಂದ ಸಾಧನೆಯ ಹಾದಿಯ ಸಮಗ್ರ ಮಾಹಿತಿಗಳನ್ನು ಒದಗಿಸಿದರು. ಮುಖ್ಯ ಅತಿಥಿ ಅಂ ನಿತೇಶ್ ಶೆಟ್ಟಿ, ಸ್ಥಾಪಕರು, ಎನ್ ಸಿ ಎಸ್ ಮತ್ತು ಕೋ. ರವರು ಮಾತನಾಡಿ ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಮತ್ತು ಇದು ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು ಎಂದರು. Ar. ಸುನಿಲ್ ಕುಮಾರ್, ಪ್ರಧಾನ ಶಿಲ್ಪಿಗಳು ಇವರು ಮಾತನಾಡಿ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಕ್ಕಳು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಸಹಕಾರಿ ಎಂದರು.
ಹಿರ್ಗಾನ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ರವರು ಮಾತನಾಡುತ್ತಾ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು ಎಂದು ಹೇಳಿದರು. ಸಹ ಸಂಸ್ಥಾಪಕರಾದ ಅಮೃತ್ ರೈ ರವರು ಅಧ್ಯಕ್ಷೀಯ ನುಡಿಗಳನ್ನಾಡುತ್ತಾ, ಕ್ರಿಯೇಟಿವ್ ಕಾಲೇಜಿನ ಉನ್ನತಿಗೆ ಸಹಕರಿಸಿದವರನ್ನು ಸ್ಮರಿಸಿದರು. ವಿದ್ಯೆಯ ಜೊತೆಗೆ ಗುಣನಡತೆಯೂ ಮುಖ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಕಾಲೇಜಿನ ತ್ರೈಮಾಸಿಕ ಪತ್ರಿಕೆ ನಿನಾದ – 10ನೇ ಸಂಚಿಕೆ ಹಾಗೂ ವಾರ್ಷಿಕ ಸಂಚಿಕೆ ಸಪ್ತಸ್ವರವನ್ನು ಬಿಡುಗಡೆಗೊಳಿಸಲಾಯಿತು. ಶ್ರೀ ಗೋಪಾಲಕೃಷ್ಣ ಸಾಮಗರನ್ನು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಕ್ರೀಡಾ ಕ್ಷೇತ್ರದಲ್ಲಿ ರಾಜ್ಯಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಸಂಸ್ಥೆಯ ಸಪ್ತ ಸಂಸ್ಥಾಪಕರು ಉಪಸ್ಥಿತರಿದ್ದರು. ಸಮಯ ಸಂಜೆ 6:30 ರಿಂದ ಕ್ರಿಯೇಟಿವ್ ಯಕ್ಷರಾಧನಂ ಹವ್ಯಾಸಿ ಕಲಾವಿದರಿಂದ ‘ವಿದ್ಯಾಮಾತೆ ಶ್ರೀ ಶಾರದೆ ಲೀಲಾಮಾನುಷ ವಿಗ್ರಹ’ ಯಕ್ಷಗಾನ ಪ್ರಸಂಗ ನೆರವೇರಿತು. ಬೋಧಕ – ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು. ಜೀವಶಾಸ್ತ್ರ ಉಪನ್ಯಾಸಕ ಲೋಹಿತ್ ಎಸ್ ಕೆ ಸ್ವಾಗತಿಸಿ, ಕನ್ನಡ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.