ಜಡ್ಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ – 2025ರ ಅಂಗವಾಗಿ ಪ್ರತಿಭಾ ಸಿಂಚನ ಕಾರ್ಯಕ್ರಮ ಜರಗಿತು. ಬೆಳಗ್ಗೆ ಜಡ್ಕಲ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಭಾರತಿ ಜೆ ಶೆಟ್ಟಿ ಧ್ವಜಾರೋಹಣಗೈದರು. ಜಡ್ಕಲ್ ಸೈಂಟ್ ಜಾರ್ಜ್ ಚರ್ಚ್ ಧರ್ಮಗುರು ಮಾಣಿ ವಿದ್ಯಾರ್ಥಿಗಳ ಪಥಸಂಚಲನದ ಗೌರವ ವಂದನೆ ಸ್ವೀಕರಿಸಿದರು. ಸಂಜೆ ಸಭಾ ಕಾರ್ಯಕ್ರಮವನ್ನು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಉದ್ಘಾಟಿಸಿದರು. ಜಡ್ಕಲ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಪಾರ್ವತಿ ಬೆಳಾರಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯರಾದ ದೇವದಾಸ್ ವಿಜೆ, ಲಕ್ಷ್ಮಿ ಚಂದನ್, ಬೆಂಗಳೂರಿನ ಸ್ವಯಂಸ್ಪೂರ್ತಿ ಫೌಂಡೇಶನ್ ಅಧ್ಯಕ್ಷ ನಾಗರಾಜ ಶೆಟ್ಟಿ, ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ ನಾಯಕ್, ಉಪಾಧ್ಯಕ್ಷ ರಾಘವೇಂದ್ರ ಬೆಳಾರಿ, ಸಂಘಟಕ ರಾಜೇಂದ್ರ ಶೆಟ್ಟಿ, ಕೊಲ್ಲೂರು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶೈಲಜಾ, ವಿದ್ಯಾರ್ಥಿ ನಾಯಕ ಸುಧನ್ವ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ರೋಸಮ್ಮ ಸೆಬಾಸ್ಟಿಯನ್ ಸ್ವಾಗತಿಸಿದರು. ಶಿಕ್ಷಕಿ ಗೀತಾ ವರದಿ ವಾಚಿಸಿದರು. ಶಿಕ್ಷಕಿ ಸುಮಲತಾ ಕಾರ್ಯಕ್ರಮ ನಿರೂಪಿಸಿದರು.