ಸೇನಾಪುರ ಗ್ರಾಮದ ಬಂಟ್ವಾಡಿ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವವು ಜನವರಿ 24, 25ರಂದು ನಡೆಯಲಿದೆ. ಜನವರಿ 24 ರಂದು ಬೆಳಗ್ಗೆ ಅಮೃತ ಮಹೋತ್ಸವದ ಸ್ವಾಗತ ಗೋಪುರ ಉದ್ಘಾಟನೆ ನಡೆಯಲಿದೆ. ನಾರಾಯಣ ಶೆಟ್ಟಿ ಅತ್ರಾಡಿ ಅಮೃತ ಮಹೋತ್ಸವ ಸಮಾರಂಭ ಉದ್ಘಾಟಿಸಲಿದ್ದಾರೆ. ಶಾಲೆಯ ಸಂಚಾಲಕ ಬಿ. ಅರುಣ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಕೋಟೇಶ್ವರ ಕಾಲೇಜಿನ ಉಪನ್ಯಾಸಕ ಗಣೇಶ ಹೆಬ್ಬಾರ್ ಕೆಳಾಕಳಿ ಶುಭಾಶಂಶನೆ ಮಾಡುವರು. ಕುಂದಾಪುರ ಉದ್ಯಮಿ ಅಭಿನಂದನ ಎ. ಶೆಟ್ಟಿ, ನಾರಾಯಣ ಎಂ. ಚಂದನ್ ಮುಂಬೈ, ನಿವೃತ್ತ ಮುಖ್ಯ ಶಿಕ್ಷಕಿ ಡೋರಾ ಸುವಾರಿಸ್, ಜಗದೀಶ ಶೆಟ್ಟಿ ಗುಡ್ಡಮ್ಮಾಡಿ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.
ಸಂಜೆ 6ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಬಿ. ವೈ. ರಾಘವೇಂದ್ರ, ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ್, ಅಜಿತ್ ಪ್ರಸಾದ್ ಶೆಟ್ಟಿ ಬೆಂಗಳೂರು, ಚಿತ್ತರಂಜನ್ ಹೆಗ್ಡೆ ಹರ್ಕೂರು, ಆದರ್ಶ ದೇವಾಡಿಗ ಮೊದಲಾದವರು ಪಾಲ್ಗೊಳ್ಳಲಿದ್ದಾರೆ. 25ರಂದು ಸಂಜೆ ಕಾರ್ಯಕ್ರಮದಲ್ಲಿ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಶ್ರೀಕಾಂತ ಶ್ಯಾನುಭಾಗ್ ಅಧ್ಯಕ್ಷತೆ ವಹಿಸಲಿದ್ದು, ಓಂಗಣೇಶ ಉಪ್ಪುಂದ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಟಿ. ಬಾಬು ಶೆಟ್ಟಿ ಮೊದಲಾದವರು ಉಪಸ್ಥಿತರಿರುವರು. 1950-51ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ವಿಶೇಷ ಸಾಧಕ ಹಳೇ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಅಭಿನಂದನ ಎ. ಶೆಟ್ಟಿ ಅವರನ್ನು ಗೌರವಿಸಲಾಗುವುದು ಎಂದು ಸಮಿತಿ ಗೌರವಾಧ್ಯಕ್ಷ ಬಿ. ಅರುಣ್ ಕುಮಾರ್ ಶೆಟ್ಟಿ ಮತ್ತು ಅಧ್ಯಕ್ಷ ಶ್ರೀಕಾಂತ ಶಾನುಭಾಗ್ ತಿಳಿಸಿದ್ದಾರೆ.