ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಬ್ಯಾಂಕ್ ನ ಎಲ್ಲಾ 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 12ರಲ್ಲೂ ಬಿಜೆಪಿ ಸಹಕಾರಿ ಪ್ರಕೋಷ್ಟದ ಬೆಂಬಲಿತ ಅಭ್ಯರ್ಥಿಗಳು ದಿಗ್ವಿಜಯ ಸಾಧಿಸಿದ್ದಾರೆ.ಉದ್ಯಮಿ, ಸಮಾಜಸೇವಕ, ಸಿದ್ದಕಟ್ಟೆ ವಲಯ ಬಂಟರ ಸಂಘದ ಅಧ್ಯಕ್ಷ ಸಂದೇಶ್ ಶೆಟ್ಟಿ ಪೊಡುಂಬರವರು ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಭರ್ಜರಿ ಜಯಗಳಿಸಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಬಂಟ್ವಾಳ ತಾಲೂಕಿನಲ್ಲಿ ಯುವ ನಾಯಕರಾಗಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಸಂದೇಶ್ ಶೆಟ್ಟಿಯವರು ಸಹೋದರ ಸಿದ್ದಕಟ್ಟೆ ಕೊಡಂಗೆ ವೀರ ವಿಕ್ರಮ ಜೋಡುಕೆರೆ ಕಂಬಳದ ರೂವಾರಿ ಸಂದೀಪ್ ಶೆಟ್ಟಿ ಪೊಡುಂಬರೊಂದಿಗೆ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ.
