“ಸ್ವಾತಂತ್ರ್ಯ ಪೂರ್ವದಲ್ಲಿ ನಮ್ಮ ದೇಶದಲ್ಲಿನ ರಾಜರುಗಳ ದುರ್ಬಲ ಆಡಳಿತ ಮತ್ತು ಅರಾಜಕತೆ ಹಾಗೂ ಭಿನ್ನಾಭಿಪ್ರಾಯ ವಿದೇಶಗರಿಗೆ ಇಲ್ಲಿ ಗಟ್ಟಿ ನೆಲೆ ಕಂಡುಕೊಳ್ಳಲು ಸಾಧ್ಯವಾಯಿತು. ಹಾಗಾಗಿ ವ್ಯಾಪಾರಕ್ಕಾಗಿ ಬಂದ ಬ್ರಿಟಿಷರು ಸುಮಾರು 250 ವರ್ಷಗಳ ಕಾಲ ನಿರಾತಂಕವಾಗಿ ನಮ್ಮ ದೇಶದಲ್ಲಿ ಆಳ್ವಿಕೆ ನಡೆಸಿದರು. ಸ್ವಾತಂತ್ರ್ಯ ಬಂದ ನಂತರ ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನ ನಮ್ಮ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿ ಅರ್ಥಪೂರ್ಣ ಬದುಕು ನಡೆಸಲು ಸಾಧ್ಯವಾಯಿತು. ಇಂದು ನಾವು ನಮ್ಮ ಸಂವಿಧಾನದ ಆಶಯದ ಅಡಿಯಲ್ಲಿ ಒಂದು ಸುಂದರವಾದ ಬದುಕನ್ನು ಸಾಗಿಸುತ್ತಿದ್ದೇವೆ. ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮ ದೇಶದ ಸಂವಿಧಾನವು ಜಗತ್ತಿಗೆ ಒಂದು ಮಾದರಿ ಸಂವಿಧಾನವಾಗಿದೆ” ಎಂದು ಸುಜ್ಞಾನ ಪದವಿಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ ಹೇಳಿದರು.
ಅವರು ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ 76ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರದೀಪ್ ಕೆ ಸ್ವಾಗತಿಸಿದರು. ಸಹಶಿಕ್ಷಕಿ ಪ್ರೀತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.









































































































