ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಇದರ ಅಧಿಕೃತ ಜಿಲ್ಲಾ ಕಚೇರಿಯನ್ನು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್ ಕುಮಾರ್ ಶೆಟ್ಟಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉದಯ ಕುಮಾರ್ ಶೆಟ್ಟಿ ಮುನಿಯಾಲು ಮತ್ತಿತರರು ಉಪಸ್ಥಿತರಿದ್ದರು.