ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಯುವ ಸಂಘಗಳ ಒಕ್ಕೂಟ ಮಂಗಳೂರು ಇವರ ಆಶ್ರಯದಲ್ಲಿ ಸವಣೂರಿನಲ್ಲಿ ಜರಗಿದ ರಾಜ್ಯಮಟ್ಟದ ಜನಪದ ನೃತ್ಯ ಸ್ಪರ್ಧೆ ‘ಕಲಾವೈಭವ’, ರಾಜ್ಯ ಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳುರವರ ನೇತೃತ್ವದಲ್ಲಿ ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುರವರನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರು ಸನ್ಮಾನಿಸಿ, ಗೌರವಿಸಿದರು.
ಈ ಸಂಧರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಪ್ರಮುಖರಾದ ದಿನೇಶ್ ಮೆದು, ತಾರಾನಾಥ ಕಾಯರ್ಗ, ಸುಂದರಿ ಬಂಬಿಲ, ರಾಕೇಶ್ ರೈ ಕೆಡೆಂಜಿ, ಶಿವಪ್ರಸಾದ್ ರೈ ಮೈಲೇರಿ, ಜಿತಾಕ್ಷಿ ಜಿ ಕುದ್ಮಾರು, ಸಚಿನ್ ಸವಣೂರು, ಸತೀಶ್ ಬಲ್ಯಾಯ, ಆಶ್ರಫ್ ಜನತಾ, ನಿಂಗರಾಜು, ಒಕ್ಕೂಟದ ರಾಜ್ಯಾಧ್ಯಕ್ಷ ಬಾಲಾಜಿ ಬೆಂಗಳೂರುರವರು ಉಪಸ್ಥಿತರಿದ್ದರು.