ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಷನ್ ನ 2025-26 ನೇ ಸಾಲಿನ ನಿಯೋಜಿತ ಅಧ್ಯಕ್ಷರಾಗಿ ಮಂಗಳೂರಿನ ಡಾ. ಬಿ. ಸಚ್ಚಿದಾನಂದ ರೈಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಫೆಬ್ರವರಿ 2 ರಂದು ನಡೆದ ಅಸೋಸಿಯೇಷನ್ ನ 49ನೇ ವಾರ್ಷಿಕ ಸಮಾವೇಶದಲ್ಲಿ ಈ ಆಯ್ಕೆ ನಡೆಯಿತು.
ಡಾ.ಸಚ್ಚಿದಾನಂದ ರೈ ಅವರು ಕೆನರಾ ಆರ್ಥೋಪೆಡಿಕ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ನ ಮಂಗಳೂರು ಘಟಕದ ಅಧ್ಯಕ್ಷರಾಗಿ, ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಆಡಳಿತ ಮಂಡಳಿ ನಿರ್ದೇಶಕರಾಗಿದ್ದಾರೆ.