ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಇದರ 2025-26 ನೇ ಸಾಲಿನಿಂದ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಬಲ್ಲಾಳ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ಯೂನಿಯನ್ ನಿರ್ದೇಶಕ ಹಾಗೂ ಶಾಸಕ ಯಶ್ಪಾಲ್ ಎ ಸುವರ್ಣ, ನಿರ್ದೇಶಕರುಗಳಾದ ಎಚ್. ಗಂಗಾಧರ ಶೆಟ್ಟಿ, ಎನ್.ಮಂಜಯ್ಯ ಶೆಟ್ಟಿ, ಬಿ.ಕರುಣಾಕರ ಶೆಟ್ಡಿ, ಪ್ರಸಾದ್ ಎಸ್.ಶೆಟ್ಟಿ, ಸುಧೀರ್ ವೈ., ಬಿ.ಪ್ರದೀಪ್ ಯಡಿಯಾಳ್, ಅನಿಲ್ ಎಸ್.ಪೂಜಾರಿ, ಅಲೆವೂರು ಹರೀಶ್ ಕಿಣಿ, ಬಿ.ಅರುಣ್ ಕುಮಾರ್ ಹೆಗ್ಡೆ, ಶ್ರೀಧರ್ ಪಿ.ಎಸ್., ಸಹಕಾರ ಸಂಘಗಳ ಉಪ ನಿಬಂಧಕ ಕೆ.ಆರ್.ಲಾವಣ್ಯ, ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಉಪಸ್ಥಿತರಿದ್ದರು.ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಕನ್ಯ ಚುನಾವಣಾ ರಿಟರ್ನಿಂಗ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರ ಪರವಾಗಿ ಆಭಿನಂದಿಸಲಾಯಿತು.