ಮಹಾಕುಂಭ ಮೇಳದಲ್ಲಿ ಪ್ರಯಾಗ್ ರಾಜ್ ನ ಪಲಿಮಾರು ಮಾಧ್ವ ಮಠದಲ್ಲಿ ಶ್ರೀ ಶ್ರೀ ಶ್ರೀ ವಿಧ್ಯಾಧೀಶ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಅಧ್ಯಕ್ಷರಾದ ಸತೀಶ್ ಶೆಟ್ಟಿ ಪಟ್ಲ ನೇತೃತ್ವದ ಕೇಂದ್ರೀಯ ಸಮಿತಿಯ ತಂಡವನ್ನು ಪೂಜ್ಯ ಸ್ವಾಮೀಜಿಯವರ ಶಿಷ್ಯ ವೃಂದದವರು ಆತ್ಮೀಯವಾಗಿ ಸ್ವಾಗತಿಸುವುದರೊಂದಿಗೆ ಊಟ ಫಲಹಾರಗಳನ್ನು ನೀಡಿ ಸತ್ಕರಿಸಿದರು ಹಾಗೂ ಬ್ರಾಹ್ಮೀ ಮುಹೂರ್ತದಲ್ಲಿ ತ್ರಿವೇಣಿ ಸಂಗಮದ ಪುಣ್ಯ ತೀರ್ಥ ಸ್ನಾನವು ಸ್ವಾಮೀಜಿಯವರ ನೇತೃತ್ವದಲ್ಲಿ ನೆರವೇರಿತು.

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೇಂದ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ ಭಂಡಾರಿ, ಕೋಶಾಧಿಕಾರಿ ಸಿಎ ಸುರೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ ಅಶೋಕನಗರ ಮತ್ತು ಡಾ. ಪ್ರಖ್ಯಾತ್ ಶೆಟ್ಟಿ ತಂಡದಲ್ಲಿದ್ದರು.


















































































































