ಸರ್ಕಾರಿ ಶಾಲೆಗಳನ್ನು ಉಳಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಕಂಪ್ಯೂಟರ್ ತರಬೇತಿ ಕೇಂದ್ರ, ಗ್ರಂಥಾಲಯ ಮತ್ತು ಕ್ರೀಡಾ ಸಾಮಗ್ರಿಗಳನ್ನು ಹಸ್ತಾಂತರಿಸಲಾಯಿತು. ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಸಮೃದ್ಧ ಬೈಂದೂರು- 300 ಟ್ರೀಸ್ ಯೋಜನೆಯ ಭಾಗವಾಗಿ ಬೈಂದೂರು ತಾಲೂಕಿನ ಮುಲ್ಲಿಬಾರು ಸ.ಹಿ.ಪ್ರಾ ಶಾಲೆಯಲ್ಲಿ ನಿರ್ಮಿಸಿರುವ ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ ಮತ್ತು ಕ್ರೀಡಾ ಸಾಮಾಗ್ರಿಗಳನ್ನು ಒಳಗೊಂಡ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಗೌರವಾನ್ವಿತ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆಯವರು ಉದ್ಘಾಟಿಸಿದರು. ಗ್ರಂಥಾಲಯಕ್ಕೆ ಪುಸ್ತಕಗಳನ್ನು, ಕ್ರೀಡಾ ಸಾಮಗ್ರಿಗಳನ್ನು ಹಸ್ತಾoತರಿಸಿದರು ಹಾಗೂ ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಆಯೋಜಿಸಿದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.ನಂತರ ಮಾತನಾಡಿದ ಶಾಸಕರು, ತಮ್ಮ ಪರಿಕಲ್ಪನೆಯ ಸಮೃದ್ಧ ಬೈಂದೂರು ಯೋಜನೆಯ ಬಗ್ಗೆ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 300 ಟ್ರೀಸ್ ಬಗ್ಗೆ ವಿವರಿಸಿದರು. ಮುಲ್ಲಿಬಾರು ಅಂತಹ ಕಡು ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಶ್ರಮಿಸುತ್ತಿರುವುದಾಗಿ ಹೇಳಿದರು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಊರ, ಪರ ಊರ ದಾನಿಗಳ ನೆರವನ್ನೂ ಸ್ಮರಿಸಿದರು.
ಸ್ವಯಂಸ್ಪೂರ್ತಿ ಫೌಂಡೇಶನ್ ನ ಸಂಚಾಲಕ ನಾಗರಾಜ ಶೆಟ್ಟಿ ಜಡ್ಕಲ್ ರವರು ಸರ್ಕಾರಿ ಶಾಲಾ ವಿಧ್ಯಾರ್ಥಿಗಳಿಗೆ ಓದಲು ಕಲಿಕಾ ಸ್ನೇಹಿ ವಾತಾವರಣ ನಿರ್ಮಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕೆನ್ನುವ ಉದ್ದೇಶದಿಂದ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದರ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಶಿಕ್ಷಕರ ಸಹಾಯದಿಂದ ಪಡೆಯಲಿ ಎಂದು ತಿಳಿಸಿದರು.
ಎಸ್.ಡಿ.ಎಂ.ಸಿ ಅಧ್ಯಕ್ಷರು, ಸರ್ವ ಸದಸ್ಯರು, ಪೋಷಕರು, ಸ್ವಯಂಸ್ಪೂರ್ತಿ ಫೌಂಡೇಶನ್ ಪದಾಧಿಕಾರಿಗಳು ಹಾಗೂ ಊರವರು ಉಪಸ್ಥಿತರಿದ್ದರು.
Previous Articleಪ್ರಯಾಗ್ ರಾಜ್ ಕುಂಭ ಮೇಳದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡ