ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಮೇ 6 ರಿಂದ 11 ರವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಪೂರ್ವಭಾವಿಯಾಗಿ ನಡೆಯಲಿರುವ ಜೀರ್ಣೋದ್ಧಾರ, ಇತರ ಅಭಿವೃದ್ಧಿ ಕಾರ್ಯಗಳು ಮತ್ತು ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳಿಗೆ ಸಂಬಂಧಿಸಿ ಫೆ. 23ರಂದು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹಾಗೂ ಕ್ಷೇತ್ರದ ತಂತ್ರಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ಉಪಸ್ಥಿತಿಯಲ್ಲಿ ‘ಪರ್ವ ಸನ್ನಾಹ’ ಎಂಬ ವಿಶೇಷ ಕಾರ್ಯಕ್ರಮಕ್ಕೆ ಎಡನೀರು ಸ್ವಾಮೀಜಿಯವರನ್ನು ಆಹ್ವಾನಿಸಲಾಯಿತು.ಕಾಟುಕುಕ್ಕೆ ಕ್ಷೇತ್ರದ ಆಡಳಿತ ಮೊಕ್ತೇಸರ ತಾರಾನಾಥ ರೈ ಪಡ್ಡಂಬೈಲು ಗುತ್ತು, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಶಾಸ್ತ್ರಿ, ಮಾತೃ ಸಮಿತಿ ಅಧ್ಯಕ್ಷೆ ರಾಜಶ್ರೀ ಟಿ. ರೈ, ಆಡಳಿತ ಮಂಡಳಿ ಸದಸ್ಯ ಗಿರೀಶ್ ಕುಮಾರ್ ಮಯ್ಯ, ಸುಧಾಕರ ಕಲ್ಲಗದ್ದೆ, ಪ್ರಶಾಂತ್ ಭಟ್ ಬಟ್ಯಮೂಲೆ ಶ್ರೀಮಠಕ್ಕೆ ತೆರಳಿ ಸ್ವಾಮೀಜಿಯ ಆಶೀರ್ವಾದ ಪಡೆದು ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
