ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆಬ್ರವರಿ 15ರವರೆಗೆ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಮಂದಾರ್ತಿ ವ್ಯವಸಾಯ ಸೇವಾ ಸಹಕಾರ ಸಂಘದ ನೇತೃತ್ವದಲ್ಲಿ ನವೋದಯ ಸ್ವಸಹಾಯ ಸಂಘ ಮತ್ತು ಊರ ಸಮಸ್ತರಿಂದ 17ನೇ ವರ್ಷದ ಹೊರೆ ಕಾಣಿಕೆ ಸಮರ್ಪಣೆ ಭಾನುವಾರ ನಡೆಯಿತು.
ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎಚ್. ಧನಂಜಯ ಶೆಟ್ಟಿ, ಮೊಕ್ತೇಸರ ಶ್ರೀನಿವಾಸ ಶೆಟ್ಟಿ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್. ಗಂಗಾಧರ ಶೆಟ್ಟಿ, ಉಪಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಮಕೃಷ್ಣ ಶೆಟ್ಟಿ, ನವೋದಯ ಸ್ವಸಹಾಯ ಸಂಘದ ಜಿಲ್ಲಾ ಮೇಲ್ವಿಚಾರಕ ಹರಿನಾಥ, ತಾಲೂಕು ಮೇಲ್ವಿಚಾರಕ ಕೃಷ್ಣ, ಮಂದಾರ್ತಿ ವಲಯ ಪ್ರೇರಕಿ ಶೋಭ ಭಾಗವಹಿಸಿದ್ದರು.
Previous Articleನೆಲಮೂಲ ಸಂಸ್ಕೃತಿಗೆ ಒತ್ತು ನೀಡಿ : ಭಾಸ್ಕರ ರೈ ಕುಕ್ಕುವಳ್ಳಿ ಕರೆ