ವ್ಯಕ್ತಿತ್ವ ವಿಕಸನ ಹಾಗೂ ತರಬೇತಿಗಾಗಿಯೇ ಇರುವ ಅಂತರಾಷ್ಟ್ರೀಯ ಸಂಸ್ಥೆ ಜೆಸಿಐ ಇದರ ಪುತ್ತೂರು ಘಟಕದ ಅಧ್ಯಕ್ಷರಾದ ಭಾಗ್ಯೇಶ್ ರೈಯವರ ನೇತೃತ್ವದಲ್ಲಿ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಕುರಿತಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ, ಕರ್ನಾಟಕ ಪೊಲೀಸ್, ಆರೋಗ್ಯ ಇಲಾಖೆಗಳ ಸಹಕಾರದೊಂದಿಗೆ ಪುತ್ತೂರು ತಾಲೂಕು ವ್ಯಾಪ್ತಿಯ 100 ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಪುತ್ತೂರಿನ ಸುಂದರರಾಮ ಶೆಟ್ಟಿ ಸ್ಮಾರಕ ಬಂಟರ ಭವನ ಕೊಂಬೆಟ್ಟು ಇಲ್ಲಿ ಚಾಲನೆಯನ್ನು ನೀಡಲಾಯಿತು. ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಶುಭ ಹಾರೈಸಿದ ಅವರು ಜೆಸಿಐ ಪುತ್ತೂರಿನ ವಿಭಿನ್ನ ಪ್ರಯತ್ನಕ್ಕೆ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್ ಎಸ್. ಆರ್, ತಾಲೂಕು ವೈದ್ಯಾಧಿಕಾರಿ ದೀಪಕ್ ರೈ, ಪುತ್ತೂರು ನಗರ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಅವರು ಮಾದಕ ವಸ್ತುಗಳಿಂದ ಉಂಟಾಗುವ ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪುತ್ತೂರು ಜೆಸಿಐ ಅಧ್ಯಕ್ಷರಾದ ಭಾಗ್ಯೇಶ್ ರೈ ಅವರು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವಿವರಿಸಿದರು ಮತ್ತು ವಿವಿಧ ಶಾಲೆಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ನಡೆಸಿಕೊಡುವ ಜೆಸಿ ಕೃಷ್ಣ ಮೋಹನ್, ಜೆಸಿ ದಾಮೋದರ ಪಾಟಾಳಿ, ಜೆಸಿ ಶಶಿರಾಜ್ ರೈ, ಜೆಸಿ ಮಾಲಿನಿ ಕಶ್ಯಪ್, ಜೆಸಿ ಪಶುಪತಿ ಶರ್ಮ, ಜೆಸಿ ಮನೋಹರ ಪಾಟಳಿ, ಜೆಸಿ ಶರತ್ ಶ್ರೀನಿವಾಸ, ಜೆಸಿ ಸೃಜನ್ ಕೇವಳ, ಜೆಸಿ ಜಗನ್ನಾಥ್ ಅರಿಯಡ್ಕರವರಿಗೆ “ಡ್ರಗ್ಸ್ ಮುಕ್ತ ಪುತ್ತೂರು” ಇದರ ಲೋಗೋ ಇರುವ ಕ್ಯಾಪ್ ತೊಡಿಸುವ ಮೂಲಕ ತರಬೇತುದಾರರಿಗೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಜೆಸಿ ರಂಜಿನಿ ಶೆಟ್ಟಿಯವರು ಬರ ಮಾಡಿಕೊಂಡರು. ಜೆಸಿ ವಾಣಿಯನ್ನು ಜೆಸಿ ಜಗನ್ನಾಥ ಅರಿಯಡ್ಕರವರು ವಾಚಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಜೆಸಿಐ ವಲಯ ಉಪಾಧ್ಯಕ್ಷರಾದ ಜೆಸಿ ಸುಹಾಸ್ ಮರಿಕೆ, ನಿಕಟ ಪೂರ್ವ ಅಧ್ಯಕ್ಷರಾದ ಮೋಹನ್ ಕೆ ಕಾರ್ಯಕ್ರಮದ ನಿರ್ದೇಶಕರಾದ ಜೆಸಿ ಜಿತೇಶ್ ರೈ (ಉಪಾಧ್ಯಕ್ಷರು ಮ್ಯಾನೇಜ್ಮೆಂಟ್), ಜೆಸಿ ಶರತ್ ಶ್ರೀನಿವಾಸ್ (ಉಪಾಧ್ಯಕ್ಷರು ಟ್ರೈನಿಂಗ್), ಕಾರ್ಯದರ್ಶಿ ಜೆಸಿ ಮನೋಹರ ಪಾಟಾಳಿ ಉಪಸ್ಥಿತರಿದ್ದರು. ರಾಮಕೃಷ್ಣ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಹಾಗೂ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲರಾದ ವಸಂತ ಮೂಲ್ಯರವರನ್ನು ಜೆಸಿಐಯ ವತಿಯಿಂದ ಗೌರವಿಸಲಾಯಿತು. ಜಾಗೃತಿ ಕಾರ್ಯಕ್ರಮವನ್ನು ಜೆಸಿ ಕೃಷ್ಣ ಮೋಹನ್ ರವರು ನಡೆಸಿಕೊಟ್ಟರು. ಜಾಗೃತಿ ಕಾರ್ಯಕ್ರಮವನ್ನು ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಕೊಂಬೆಟ್ಟು ಇಲ್ಲಿನ ಪ್ರೌಢಶಾಲಾದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಹಿಳಾ ಸಮನ್ವಯಾಧಿಕಾರಿ ಜೆಸಿ ಆಶಾ ಮೋಹನ್, ಜೆಸಿ ಭವಿತ್, ಕೋಶಾಧಿಕಾರಿ ಜೆಸಿ ರುಕ್ಮಯ್ಯ, ಜೆಸಿ ರಘು ಶೆಟ್ಟಿ, ರಾಮಕೃಷ್ಣ ಪ್ರೌಢಶಾಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಇಲ್ಲಿನ ಪ್ರೌಢಶಾಲಾ ವಿಭಾಗದ ಶಿಕ್ಷಕ ವೃಂದದವರು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.