ಶಿವಾಯ ಫೌಂಡೇಶನ್ ಮುಂಬೈ ಸಂಸ್ಥೆಯ ಸಮಾಜ ಸೇವಾ ಚಟುವಟಿಕೆಗಳನ್ನು ಗುರುತಿಸಿ, ದಕ್ಷಿಣದ ಕುಂಭ ಮೇಳವೆಂದೇ ಪ್ರಸಿದ್ಧಿ ಪಡೆದಿರುವ, ಲಕ್ಷಾಂತರ ಭಕ್ತ ಜನರು ಸೇರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವದ ವೇದಿಕೆಯಲ್ಲಿ ಸೇವಾ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭ ಗವಿಸಿದ್ದೇಶ್ವರ ಮಠದ ಶ್ರೀ ಅಭಿನವ ಸ್ವಾಮಿಗಳು, ತುಮಕೂರು ಸಿದ್ದಗಂಗ ಮಠದ ಶ್ರೀ ಸಿದ್ಧಲಿಂಗ ಮಹಾ ಸ್ವಾಮಿಗಳು, ಶ್ರೀ ಷಣ್ಮುಖರೂಢ ಮಠ ವಿಜಯಪುರದ ಶ್ರೀ ಅಭಿನವ ಸಿದ್ಧಾರೂಢ ಮಹಾಸ್ವಾಮಿಗಳು ಸೇರಿದಂತೆ ಬಸವ ತತ್ವವನ್ನು ಪ್ರತಿಪಾದಿಸುವ ಶರಣರು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹಿಂದೂಸ್ತಾನಿ ಗಾಯಕರಾದ ಡಾ. ವೆಂಕಟೇಶ್ ಕುಮಾರ್, ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸೇರಿದಂತೆ ಅತಿಥಿ ಗಣ್ಯರು ಮಠದ ಅಪಾರ ಭಕ್ತಾದಿಗಳು ಉಪಸ್ಥಿತರಿದ್ದರು. ಸಂಸ್ಥೆಯ ಪರವಾಗಿ ಪ್ರಶಾಂತ್ ಶೆಟ್ಟಿ ಪಲಿಮಾರು, ಮಧುಸೂದನ್ ಶೆಟ್ಟಿ ಹಿರಿಯಡ್ಕ, ಪ್ರಶಾಂತ್ ಶೆಟ್ಟಿ ಪಂಜ ಮತ್ತು ಡಾ. ಸ್ವರ್ಣಾ ಶೆಟ್ಟಿಯವರು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.






































































































