ಸರ್ಕಾರಿ ಶಾಲೆಗಳನ್ನು ಉಳಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಕಂಪ್ಯೂಟರ್ ತರಬೇತಿ ಕೇಂದ್ರ ಮತ್ತು ಕ್ರೀಡಾ ಸಾಮಗ್ರಿಗಳನ್ನು ಹಸ್ತಾಂತರಿಸಲಾಯಿತು. ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಸಮೃದ್ಧ ಬೈಂದೂರು- 300 ಟ್ರೀಸ್ ಯೋಜನೆಯ ಭಾಗವಾಗಿ ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಯಳಜಿತ್
ಸ.ಹಿ.ಪ್ರಾ. ಶಾಲೆಯಲ್ಲಿ ನಿರ್ಮಿಸಿರುವ ಕಂಪ್ಯೂಟರ್ ಲ್ಯಾಬ್ ಮತ್ತು ಕ್ರೀಡಾ ಸಾಮಾಗ್ರಿಗಳು, ಪುಸ್ತಕಗಳನ್ನು ಒಳಗೊಂಡ “ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರ”ವನ್ನು ಉದ್ಯಮಿಗಳು, ಬರಹಗಾರರು, ಕೊಡುಗೈ ದಾನಿಗಳು ಆದ ನಾಡೋಜ ಎಸ್ ಷಡಕ್ಷರಿಯವರು ಉದ್ಘಾಟಿಸಿದರು. ಗ್ರಂಥಾಲಯಕ್ಕೆ ಪುಸ್ತಕಗಳನ್ನು, ಕ್ರೀಡಾ ಸಾಮಗ್ರಿಗಳನ್ನು ಹಸ್ತಾಂತರಿಸಿದರು. ಅಂಗನವಾಡಿ ಮಕ್ಕಳಿಗೆ ಆಟಿಕೆಗಳನ್ನು, ಪುಸ್ತಕಗಳನ್ನು ವಿತರಿಸಿದರು ಹಾಗೂ ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಆಯೋಜಿಸಿದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಹತ್ತಾರು ಗಣ್ಯರ ಉಪಸ್ಥಿತಿ ಹಾಗೂ ಸಾವಿರಾರು ಗ್ರಾಮಸ್ಥರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಸ್ವಯಂ ಸ್ಫೂರ್ತಿ ಫೌಂಡೇಶನ್ ಮುಖ್ಯಸ್ಥ ನಾಗರಾಜ್ ಶೆಟ್ಟಿ ಜಡ್ಕಲ್ ಉಪಸ್ಥಿತರಿದ್ದು, ಈ ಸಂಧರ್ಭದಲ್ಲಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರದ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಶಿಕ್ಷಕರ ಸಹಾಯದಿಂದ ಪಡೆಯಲಿ ಎನ್ನುವುದು ಸ್ವಯಂ ಸ್ಫೂರ್ತಿ ಫೌಂಡೇಶನ್ ತಂಡದ ಆಶಯ.
Next Article ರಾವಣ ಕೆಟ್ಟವನಲ್ಲ