ಸರ್ವರ ಇಷ್ಟಾರ್ಥ ಪೂರೈಸುವ ಕಾಪು ಮಾರಿಯಮ್ಮ ನಮ್ಮ ತುಳುನಾಡಿಗೆ ಆರಾಧ್ಯ ದೇವತೆ. ಲಕ್ಷಾಂತರ ಭಕ್ತರು ಮಾರಿಯಮ್ಮನ ಸನ್ನಿಧಿಗೆ ಬಂದು ದರ್ಶನ ಪಡೆಯುತ್ತಾರೆ. ಸಮಿತಿಯ ಸಂಕಲ್ಪದಂತೆ ಪುರಾತನ ಕಾಪು ಮಾರಿಯಮ್ಮನ ದೇವಸ್ಥಾನವನ್ನು ಬಹಳ ದೊಡ್ಡ ಮಟ್ಟದಲ್ಲಿ ಅತ್ಯಂತ ಸುಂದರ ವಿನ್ಯಾಸದೊಂದಿಗೆ ಜೀರ್ಣೋದ್ಧಾರಗೊಳಿಸಲಾಗಿದೆ. ನಾವು ಕೂಡ ಈ ಕಾರ್ಯದಲ್ಲಿ ಕೈಜೋಡಿಸಿದ್ದೇವೆ. ದೇವಸ್ಥಾನದ ಬ್ರಹ್ಮಕಲಶೋತ್ಸವ ಫೆಬ್ರವರಿ 25 ರಿಂದ ಮಾರ್ಚ್ 5ರವರೆಗೆ ನಡೆಯಲಿದ್ದು, ಎಲ್ಲರೂ ಭಾಗಿಯಾಗಿ ಮಾರಿಯಮ್ಮನ ಕೃಪೆಗೆ ಪಾತ್ರರಾಗುವಂತೆ ಪುಣೆ ಬಂಟರ ಸಂಘದ ಅಧ್ಯಕ್ಷ ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ದಾರ ಪುಣೆ ಸಮಿತಿಯ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ತಿಳಿಸಿದರು.
ಕಾಪು ಹೊಸ ಮಾರಿಗುಡಿ ದೇವಸ್ಥಾನ ಜೀರ್ಣೋದ್ಧಾರ ಪುಣೆ ಸಮಿತಿಯಿಂದ ನಡೆದ ಶ್ರೀ ಮಾರಿಯಮ್ಮನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಬಿಡುಗಡೆಗೊಳಿಸಿ ಮಾತನಾಡಿ, ಕಾಪು ಮಾರಿಯಮ್ಮನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಗೆ ಪೂರಕವಾಗಿ ನಾವು ಪುಣೆಯಲ್ಲಿ 9 ಮಂದಿಯ ಸಮಿತಿ ರಚಿಸಿ, ನಂತರ ಉಪ ಸಮಿತಿಗಳ ಮೂಲಕ ಮಾರಿಯಮ್ಮ ದೇಗುಲದ ಜೀರ್ಣೋದ್ಧಾರಕ್ಕೆ ದೇಣಿಗೆ ಸಂಗ್ರಹ ಮಾಡಿ ಮಾರಿಯಮ್ಮನ ಸೇವೆಯಲ್ಲಿ ನಮ್ಮ ಕಾಣಿಕೆ ಅರ್ಪಣೆ ಮಾಡಿದ್ದೇವೆ. ಎಲ್ಲಾ ಕಾರ್ಯಕ್ರಮಗಳಲ್ಲಿ ಪುಣೆಯ ಭಕ್ತರು ಪಾಲ್ಗೊಳ್ಳಬೇಕು. ದೇಣೆಗೆ ನೀಡಿದ ಪ್ರತಿಯೊಬ್ಬರಿಗೂ ಆಮಂತ್ರಣ ಪತ್ರಿಕೆ ತಲುಪಿಸುವ ಕಾರ್ಯ ನಮ್ಮ ಸಮಿತಿಯಿಂದಾಗಬೇಕು ಎಂದರು.
ಕಾಪು ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ದಾರ ಪುಣೆ ಸಮಿತಿಯ ಅಧ್ಯಕ್ಷರು ಹಾಗೂ ಸಮಿತಿ ಸದಸ್ಯರು ಪ್ರಾರ್ಥನೆಗೈದು ದೀಪ ಬೆಳಗಿಸಿ, ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಕಾಪು ಮಾರಿಯಮ್ಮನ ಪುಣೆ ಸಮಿತಿಯ ಕಾರ್ಯಾಧ್ಯಕ್ಷ ಮಾಧವ ಶೆಟ್ಟಿ, ಉಪಾಧ್ಯಕ್ಷರಾದ ಎರ್ಮಾಳ್ ಚಂದ್ರಹಾಸ ಶೆಟ್ಟಿ, ವಿಶ್ವನಾಥ್ ಪೂಜಾರಿ ಕಡ್ತಲ, ಪ್ರವೀಣ್ ಶೆಟ್ಟಿ ಪುತ್ತೂರು, ಪ್ರಧಾನ ಕಾರ್ಯದರ್ಶಿ ಪ್ರಸನ್ನ ಶೆಟ್ಟಿ, ಕಾರ್ಯದರ್ಶಿ ಉದಯ ಶೆಟ್ಟಿ ಕಳತ್ತೂರು, ಕೋಶಾಧಿಕಾರಿ ದಿನೇಶ್ ಶೆಟ್ಟಿ ಕಳತ್ತೂರು, ಜತೆ ಕೋಶಾಧಿಕಾರಿ ಜಗದೀಶ್ ಶೆಟ್ಟಿ, ಪುಣೆ ಬಂಟರ ಸಂಘದ ಪ್ರಮುಖರಾದ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗ್ಡೆ, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ ಹೆರ್ಡೆಬೀಡು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್. ಶೆಟ್ಟಿ, ಬಂಟ್ಸ್ ಅಸೋಸಿಯೇಷನ್ ಪುಣೆ ಅಧ್ಯಕ್ಷ ರೋಹಿತ್ ಶೆಟ್ಟಿ ನಗ್ರಿಗುತ್ತು ಬಂಟರ ಸಂಘದ ಸಮಿತಿಯ ಪ್ರಮುಖರಾದ ಸತೀಶ್ ಶೆಟ್ಟಿ, ಕಿಶೋರ್ ಹೆಗ್ಡೆ, ರವಿ ಶೆಟ್ಟಿ, ದಕ್ಷಿಣ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಶೇಖರ್ ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ನಾರಾಯಣ ಹೆಗ್ಡೆ, ಪೂರ್ವ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸುನಿಲ್ ಶೆಟ್ಟಿ, ಪಶ್ಚಿಮ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಪ್ರಕಾಶ್ ಶೆಟ್ಟಿ, ವಸಂತ್ ಶೆಟ್ಟಿ, ಗಣೇಶ್ ಪೂಂಜಾ, ಸುಧಾಕರ ಶೆಟ್ಟಿ ಮತ್ತು ಸಮಿತಿ ಪದಾಧಿಕಾರಿಗಳು, ಪುಣೆ ಬಿಲ್ಲವ ಸೇವಾ ಸಂಘ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾ ಕೆ. ಪೂಜಾರಿ, ಹೆಚ್ಚಿನ ಸಂಖ್ಯೆಯ ಮಾರಿಯಮ್ಮನ ಭಕ್ತರು ಉಪಸ್ಥಿತರಿದ್ದರು.
ಪ್ರಮುಖರಾದ ವಿಶ್ವನಾಥ್ ಪೂಜಾರಿ ಕಡ್ತಲ, ರೋಹಿತ್ ಶೆಟ್ಟಿ ನಗ್ರಿಗುತ್ತು, ರವಿ ಶೆಟ್ಟಿಯವರು ಕಾಪು ಮಾರಿಯಮ್ಮನ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಿ ಮಾತನಾಡಿಸಿದರು.
ಚಿತ್ರ, ವರದಿ: ಹರೀಶ್ ಮೂಡಬಿದ್ರಿ, ಪುಣೆ