ಬೆಂಗಳೂರಿನ ಪ್ರತಿಷ್ಠಿತ ಸೌತ್ ಫೀಲ್ಡ್ ಕೋಟಿಂಗ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ತನ್ನ ಅತ್ಯುತ್ತಮ ಔದ್ಯಮಿಕ ನಿರ್ವಹಣೆಗಾಗಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿಗೆ ಪಾತ್ರವಾಗಿದೆ. ಫೆಬ್ರವರಿ 13 ರಂದು ಬೆಂಗಳೂರಿನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ರವರಿಂದ ಸಂಸ್ಥೆಯ ಆಡಳಿತ ನಿರ್ದೇಶಕರಾದ ಎಸ್.ಎಸ್ ಹೆಗ್ಡೆಯವರು “ಸೆಕ್ಟರ್ ಎಕ್ಸಲೆನ್ಸ್ ಅವಾರ್ಡ್” ಪ್ರಶಸ್ತಿ ಸ್ವೀಕರಿಸಿದರು.

ಕೊಡುಗೈ ದಾನಿ ಎಸ್.ಎಸ್ ಹೆಗ್ಡೆಯವರು ಉದ್ಯಮಿಯಾಗಿದ್ದುಕೊಂಡು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.