ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ರೂಪೇಶ್ ರೈ ತಡಂಬೈಲ್ ಆಯ್ಕೆಯಾಗಿದ್ದಾರೆ.

ರೂಪೇಶ್ ರೈ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದವರು. ಪಕ್ಷ ಸಂಘಟನೆಯಲ್ಲಿ ತನ್ನನ್ನು ನಿರಂತರವಾಗಿ ತೊಡಗಿಸಿ ಕೊಂಡಿರುವ ಅವರನ್ನು ಈಗ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದೆ. ರೂಪೇಶ್ ರೈ ಸುರತ್ಕಲ್ ಬಂಟರ ಸಂಘದ ನಿರ್ದೇಶಕರಾಗಿ, ವೀರ ಕೇಸರಿ ತಡಂಬೈಲ್ ಇದರ ಪದಾಧಿಕಾರಿಯಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ದುಡಿದಿದ್ದಾರೆ.