ಬಂಟ್ಸ್ ಬಹ್ರೈನ್ ಸಂಘಟನೆಯ ನೂತನ ಅಧ್ಯಕ್ಷರಾಗಿ ಡಾ. ಮಿಥುನ್ ಭಂಡಾರಿಯವರು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸದಸ್ಯರ ವಾರ್ಷಿಕ ಸಭೆಯಲ್ಲಿ ಡಾ. ಭಂಡಾರಿ ಅವರು ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ.

ಅವರೊಂದಿಗೆ ಉಪಾಧ್ಯಕ್ಷರಾಗಿ ಅಜಯ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ರೋಹನ್ ಶೆಟ್ಟಿ, ಸಹ ಕಾರ್ಯದರ್ಶಿಯಾಗಿ ಸುಕೇಶ್ ಶೆಟ್ಟಿ, ಖಜಾಂಚಿಯಾಗಿ ಪ್ರಶಾಂತ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಯಾಗಿ ನಿತಿನ್ ಶೆಟ್ಟಿ, ಸಹಾಯಕ ಕ್ರೀಡಾ ಕಾರ್ಯದರ್ಶಿಯಾಗಿ ಗಣೇಶ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಯಕ್ಷಿತ್ ಶೆಟ್ಟಿ, ಸಹಾಯಕ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಧನಂಜಯ್ ರೈ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ದೀಪ ರವೀಂದ್ರ ಶೆಟ್ಟಿ, ನೂತನ ಆಡಲಿತ ಮಂಡಳಿಯಲ್ಲಿ ಸೇವೆ ಸಲ್ಲಿಸಲಿದ್ದಾರೆ. ನೂತನ ಆಡಳಿತ ಮಂಡಳಿಯು ಸತ್ಯನಾರಾಯಣ ಪೂಜೆಯೊಂದಿಗೆ ಕಾರ್ಯಾರಂಭ ಮಾಡಲಿದೆ.