ಸನ್ಮಾನಗಳು ನಮ್ಮ ಜವಾಬ್ದಾರಿಯನ್ನು ಹೆಚ್ಚಿಸುತ್ತದೆ. ಈ ನಿಟ್ಟಿನಲ್ಲಿ ಹೆಬ್ರಿ ಬಂಟರ ಸಂಘದಿಂದ ಹುಟ್ಟೂರಿನಲ್ಲಿ ಆದ ಸನ್ಮಾನ ಅತ್ಯಂತ ಸಂತೋಷ ತಂದಿದೆ. ಹೆಬ್ರಿ ಸಂಘಕ್ಕೆ ಬೆಂಗಳೂರು ಬಂಟರ ಸಂಘದ ಮೂಲಕ ಮುಂದೆಯೂ ಸಹಕಾರವನ್ನು ನೀಡಲಾಗುವುದು ಎಂದು ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿಎ ಅಶೋಕ್ ಕುಮಾರ್ ಶೆಟ್ಟಿ ಹೇಳಿದರು. ಅವರು ಮಾರ್ಚ್ 8 ರಂದು ಹೆಬ್ರಿ ಶ್ರೀಮತಿ ಶೀಲಾ ಸುಭೋದ ಬಲ್ಲಾಳ್ ಸಭಾಭವನದಲ್ಲಿ ಬಂಟರ ಯಾನೆ ನಾಡವರ ಸಂಘ ಹೆಬ್ರಿ ಅಜೆಕಾರು ವಲಯದ ವತಿಯಿಂದ ಹೆಬ್ಬೇರಿ ಬಂಟ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದರು.
ನೂರಾರು ಕೋಟಿ ಆಸ್ತಿಯನ್ನು ಹೊಂದಿರುವ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ನಮ್ಮ ಸಮಾಜದ ಆಸ್ತಿ ಎಂದು ಬಂಟರ ಸಂಘದ ಗೌರವಾಧ್ಯಕ್ಷ ಮುನಿಯಾಲು ಉದಯ ಶೆಟ್ಟಿ ಹೇಳಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸೀತಾನದಿ ವಿಟ್ಟಲ್ ಶೆಟ್ಟಿ ವಹಿಸಿ ಮಾತನಾಡಿ, ಸಮಾಜ ಬಾಂಧವರ ನಿರಂತರ ಸಹಕಾರ ಮತ್ತು ದಾನಿಗಳ ಪ್ರೋತ್ಸಾಹದಿಂದ ಸಂಘದ ಪ್ರತಿಯೊಂದು ಕಾರ್ಯಕ್ರಮವು ಯಶಸ್ಸನ್ನು ಕಂಡಿದೆ ಎಂದರು. ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಸಹಾಯಧನ ವಿತರಣೆ ನಡೆಯಿತು. ಬಂಟ ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಾತೃ ಸಂಘದ ನಿರ್ದೇಶಕ ಬಿ. ಕರುಣಾಕರ ಶೆಟ್ಟಿ, ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಕೆ. ಅಡ್ಯಂತಾಯ, ಜಯರಾಮ್ ಶೆಟ್ಟಿ, ಕೃಷ್ಣ ಶೆಟ್ಟಿ ಕಿನ್ನಿಗುಡ್ಡೆ, ಸಂಜೀವ ಶೆಟ್ಟಿ ಕೆರೆಬೆಟ್ಟು, ರಘುರಾಮ ಶೆಟ್ಟಿ, ಗುಳ್ಕಾಡು ಭಾಸ್ಕರ್ ಶೆಟ್ಟಿ, ಶರತ್ ಹೆಗ್ಡೆ, ಗೀತಾ ಎಸ್. ಹೆಗ್ಡೆ, ರಮೇಶ್ ಶೆಟ್ಟಿ, ನಿಲೇಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಬಂಟರ ಸಂಘದ ಪ್ರಮುಖರಾದ ರಮಾನಂದ ಹೆಗ್ಡೆ, ನೀರೆ ಕೃಷ್ಣ ಶೆಟ್ಟಿ, ಸಂಘದ ಉಪಾಧ್ಯಕ್ಷರಾದ ಹರ್ಷ ಶೆಟ್ಟಿ, ವಾದಿರಾಜ್ ಶೆಟ್ಟಿ, ಆಶಾ ಬಿ. ಶೆಟ್ಟಿ, ಸುರೇಶ್ ಶೆಟ್ಟಿ, ದಯಾನಂದ ಶೆಟ್ಟಿ, ಭಾಸ್ಕರ್ ಶೆಟ್ಟಿ, ಸತೀಶ್ ಶೆಟ್ಟಿ, ಮಾತೃ ಸಂಘದ ನಿರ್ದೇಶಕ ಪ್ರಮೋದ್ ಆರ್. ಶೆಟ್ಟಿ, ಕೋಶಾಧಿಕಾರಿ ರವೀಂದ್ರನಾಥ್ ಶೆಟ್ಟಿ, ರತ್ನಾಕರ್ ಹೆಗ್ಡೆ, ಜ್ಯೋತಿ ಕೆ. ಶೆಟ್ಟಿ, ಸಂಪತ್ ಕುಮಾರ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ರಮೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಸೀತಾನದಿ ವಿಟ್ಟಲ್ ಶೆಟ್ಟಿ ಸ್ವಾಗತಿಸಿ, ಸಹ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ನವೀನ್ ಕೆ. ಅಡ್ಯಂತಾಯ ವಂದಿಸಿದರು. ಇದೇ ಸಂದರ್ಭದಲ್ಲಿ ಭಜನಾ ಕಾರ್ಯಕ್ರಮ, ಶ್ಯಾಮಲ ವಿಟ್ಟಲ್ ಶೆಟ್ಟಿ ಅವರ ನೇತೃತ್ವದಲ್ಲಿ ಸತ್ಯನಾರಾಯಣ ಪೂಜೆ ನಡೆಯಿತು.
