ಬೋಂಬೆ ಬಂಟ್ಸ್ ಅಸೋಸಿಯೇಷನ್ ನ 41ನೇ ವಾರ್ಷಿಕ ಮಹಾಸಭೆಯ ಬಳಿಕ ಬಹಿರಂಗ ಅಧಿವೇಶನವನ್ನು ಮಾರ್ಚ್ 9 ರಂದು ನವಿ ಮುಂಬಯಿಯ ಜೂಯಿನಗರದ ಬಂಟ್ಸ್ ಸೆಂಟರ್ ನ ಶಶಿಕಲಾ ಮನಮೋಹನ್ ಶೆಟ್ಟಿ ಕಾಂಪ್ಲೆಕ್ಸ್ ನ ಶ್ರೀಮತಿ ಸೌಮ್ಯಲತಾ ಸದಾನಂದ ಶೆಟ್ಟಿ ಆಡಿಟೋರಿಯಂನಲ್ಲಿ ಎಸೋಸಿಯೇಷನ್ ನ ಅಧ್ಯಕ್ಷರಾದ ಸಿಎ ಸುರೇಂದ್ರ ಕೆ. ಶೆಟ್ಟಿ ದೀಪ ಬೆಳಗಿಸಿ ಚಾಲನೆ ನೀಡಿದರು. ಬಹಿರಂಗ ಅಧಿವೇಶನದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಶ್ರೀಮತಿ ಚಂದ್ರಿಕಾ ಹರೀಶ್ ಶೆಟ್ಟಿ ದಂಪತಿಯನ್ನು ವಿಶೇಷವಾಗಿ ಸನ್ಮಾನಿಸಲಾಯಿತು.
ಐಕಳ ಹರೀಶ್ ಶೆಟ್ಟಿ ಅವರ ಸುದೀರ್ಘ ಕಾಲದ ಸಾಮಾಜಿಕ ಸೇವೆಗಳನ್ನು ಗುರುತಿಸಿ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನಿತರ ಪರಿಚಯವನ್ನು ಅಸೋಸಿಯೇಷನ್ ಉಪಾಧ್ಯಕ್ಷ ನ್ಯಾಯವಾದಿ ಡಿ. ಕೆ. ಶೆಟ್ಟಿ ಮಾಡಿದರು. ವೇದಿಕೆಯಲ್ಲಿ ಡಾ. ಶ್ರೀಧರ್ ಶೆಟ್ಟಿ (ಶಿಕ್ಷಣ), ಡಾ. ಸುನಿಲ್ ಎಚ್ ಶೆಟ್ಟಿ (ವೈದ್ಯಕೀಯ) ಮತ್ತು ಪ್ರತಾಪ್ ವಿ ಶೆಟ್ಟಿ (ಕ್ರೀಡೆ), ಬೋಂಬೆ ಬಂಟ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ನ್ಯಾಯವಾದಿ ಡಿ.ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಐಕಳ ಕಿಶೋರ್ ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ವಿಶ್ವನಾಥ ಶೆಟ್ಟಿ, ಜೊತೆ ಕಾರ್ಯದರ್ಶಿ ನ್ಯಾಯವಾದಿ ಗುಣಕರ ಡಿ ಶೆಟ್ಟಿ, ಜೊತೆ ಕೋಶಾಧಿಕಾರಿ ಸಿಎ ದಿವಾಕರ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತೇಜಾಕ್ಷಿ ಎಸ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷೆ ದೃಶ್ಯಾ ಕೆ. ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ನಾಟಕಕಾರ, ಲೇಖಕ ನಾರಾಯಣ ಶೆಟ್ಟಿ ನಂದಳಿಕೆ ನಿರೂಪಿಸಿದರು.
