ಬಂಟರ ಯಾನೆ ನಾಡವರ ಸಂಘ ಶಿರೂರು ಮತ್ತು ಯುವ ಬಂಟರ ಸಂಘ ಶಿರೂರು, ಬೆಂಗಳೂರು ಬಂಟರ ಸಂಘ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಇದರ ಸಹಯೋಗದೊಂದಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಶಿರೂರು ದಾಸನಾಡಿ ಶ್ರೀ ವೆಂಕಟರಮಣ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಡಾ. ಯು. ಮಾಧವ ಶೆಟ್ಟಿ ಗಂಗಾವತಿ ವಿದ್ಯಾರ್ಥಿವೇತನ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಿರೂರು ಬಂಟರ ಸಂಘ ಕಳೆದ ಹಲವು ವರ್ಷಗಳಿಂದ ಶಿಕ್ಷಣ, ಸಾಹಿತ್ಯ, ಆಸಕ್ತರಿಗೆ ನೆರವು ನೀಡುವುದರ ಮೂಲಕ ವಿವಿಧ ಸಂಘಗಳಿಗೆ ಮಾದರಿ ಸಂಘವಾಗಿದೆ. ಸಮುದಾಯ ಸಂಘಟನೆಗಳು ಶೈಕ್ಷಣಿಕ, ಸಾಮಾಜಿಕ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮುತುವರ್ಜಿ ವಹಿಸಿ ಸಮಾಜದ ಅಶಕ್ತರಿಗೆ ನೆರವಾದಾಗ ಬಡ ಕುಟುಂಬಗಳು ಮುಖ್ಯ ವಾಹಿನಿಯಲ್ಲಿ ಗುರುತಿಸಲು ಸಾಧ್ಯವಾಗುತ್ತದೆ. ಸಮಾಜಮುಖಿ ಕಾರ್ಯಕ್ರಮದ ಮೂಲಕ ಸಂಘಟಿತರಾದಾಗ ಸಮುದಾಯಕ್ಕೆ ಶಕ್ತಿ ದೊರೆಯುತ್ತದೆ ಎಂದರು.
ಶಿರೂರು ಬಂಟರ ಸಂಘದ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ, ಬೆಟ್ಟಿನಮನೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿಎ ಅಶೋಕ ಕುಮಾರ್ ಶೆಟ್ಟಿ, ಉಮೇಶ್ ಕುಮಾರ್ ಶೆಟ್ಟಿ ಚೇರ್ಮನ್ ವಿದ್ಯಾರ್ಥಿ ವೇತನ ಸಮಿತಿ ಬಂಟರ ಸಂಘ ಬೆಂಗಳೂರು, ಬೈಂದೂರು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಸಾಲ್ಗದ್ದೆ ಶಶಿಧರ ಶೆಟ್ಟಿ, ಶಿರೂರು ಯುವ ಬಂಟರ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಶೆಟ್ಟಿ, ದಾಸನಾಡಿ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ನಾಗಯ್ಯ ಶೆಟ್ಟಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶಿರೂರಿನ ಶಬರೀಶ ಶೆಟ್ಟಿಯವರನ್ನು ಗೌರವಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಬಂಟ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಹಾಗೂ ಬಂಟ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.
ಶಿರೂರು ಬಂಟರ ಸಂಘದ ಮಾಜಿ ಅಧ್ಯಕ್ಷ ಸತೀಶ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿದರು. ದಾಮೋದರ ಶೆಟ್ಟಿ ಸಂಘದ ವಾರ್ಷಿಕ ವರದಿ ವಾಚಿಸಿದರು. ಎಚ್. ಚಂದ್ರಶೇಖರ ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು. ಸಂಘದ ಕೋಶಾಧಿಕಾರಿ ಅರುಣ್ ಕುಮಾರ್ ಶೆಟ್ಟಿ ವಿದ್ಯಾರ್ಥಿ ವೇತನ ಪಟ್ಟಿ ವಾಚಿಸಿದರು. ಶಾಂತಾನಂದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರಾಘವೇಂದ್ರ ಶೆಟ್ಟಿ ವಂದಿಸಿದರು.
