ಉಡುಪಿ ಜಿಲ್ಲೆಯ ಪರೀಕ ಚೆನ್ನಿಬೆಟ್ಟು ಶತಾಯುಷಿ ಸರಸ್ವತಿ ಸೂರಪ್ಪ ಹೆಗ್ಡೆ ಅವರು ತನ್ನ 102 ನೇ ವರ್ಷ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಯುಎಇ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಹಾಗೂ ಸಹೋದರಿಯರು, ಸಹೋದರರು, ಅಳಿಯಂದಿರು, ಸೊಸೆಯರು, ಮೊಮ್ಮಕ್ಕಳು, ಮರಿ ಮಕ್ಕಳು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸರಸ್ವತಿ ಸೂರಪ್ಪ ಹೆಗ್ಡೆ ನಿಧನಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು, ಯುಎಇ ಬಂಟರ ಸಂಘ ಅಧ್ಯಕ್ಷ ವಕ್ವಾಡಿ ಪ್ರವೀಣ್ ಶೆಟ್ಟಿ ಮತ್ತು ಪದಾಧಿಕಾರಿಗಳು, ಬಂಟ್ಸ್ ನೌ ಮಾಧ್ಯಮ ಸಂಸ್ಥೆ ಗೌರವ ಸಂಪಾದಕ ಅರುಣ್ ಶೆಟ್ಟಿ ಎರ್ಮಾಳು, ಸ್ಥಾಪಕ ರಂಜಿತ್ ಶೆಟ್ಟಿಯವರು ದುಃಖ ಸಂತಾಪ ಸೂಚಿಸಿದ್ದಾರೆ.