ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ಸಹಕಾರಿ ಸಂಘ ಅತ್ತಾವರ ಮಂಗಳೂರು ಇದರ ನೂತನ ಅಧ್ಯಕ್ಷರಾಗಿ ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಶಾಂತಾನಂದ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.ಮಂಗಳೂರು ಅತ್ತಾವರ ಮೆಸ್ಕಾಂ ನಲ್ಲಿ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕುಂದಾಪುರ ಮೂಲದ ಶಾಂತಾನಂದ ಶೆಟ್ಟಿಯವರು ಸಮಾಜಸೇವಕರಾಗಿಯೂ ಗುರುತಿಸಿಕೊಂಡಿದ್ದಾರೆ.
