ಮೂಡುಬಿದಿರೆ: ‘ಕ್ರೀಡೆಯಲ್ಲಿ ಸಕ್ರಿಯರಾಗುವ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ’ ಎಂದು ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಹೇಳಿದರು. ನಗರದ ಸ್ವರಾಜ್ ಮೈದಾನದಲ್ಲಿ ಶುಕ್ರವಾರ ನಡೆದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಂಸ್ಥೆಗಳ ‘ಕ್ರೀಡಾ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರು ಸಂಘಟಿಸುವ ಕಾರ್ಯಕ್ರಮ ಶಿಸ್ತು ಮತ್ತು ಅನನ್ಯತೆಗೆ ಸಾಕ್ಷಿಯಾಗಿರುತ್ತದೆ ಎಂದರು. ಇದು ಜೀವನದಲ್ಲಿ ನಾನು ಕಂಡ ಅನನ್ಯ ಕಾರ್ಯಕ್ರಮ ಎಂದು ಶ್ಲಾಘಿಸಿದರು. ರಾಷ್ಟ್ರ ಮಟ್ಟದ ಕ್ರೀಡೆಯಲ್ಲಿ ಸಾಧನೆ ಮಾಡಿದ ಪ್ರತಿಷ್ಠಾನದ ಎಂಟು ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನು ತಂದು, ಏಕಲವ್ಯ ಪ್ರಶಸ್ತಿ ಪುರಸ್ಕೃತ, ಅಂತರರಾಷ್ಟ್ರೀಯ ಕ್ರೀಡಾಪಟು, ಕಾಲೇಜಿನ ಹಿರಿಯ ವಿದ್ಯಾರ್ಥಿ ಪೊಲೀಸ್ ಉಪ ನಿರೀಕ್ಷಕ ಅಭಿಷೇಕ ಎನ್. ಶೆಟ್ಟಿ ಅವರಿಗೆ ಹಸ್ತಾಂತರಿಸಿ, ಕ್ರೀಡಾ ಜ್ಯೋತಿ ಬೆಳಗಲಾಯಿತು.ವಿದ್ಯಾರ್ಥಿನಿ ವೀಕ್ಷಿತಾ ರಾಮಕೃಷ್ಣ ಗೌಡ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಸ್ವಾಗತಿಸಿದರು. ಆಳ್ವಾಸ್ ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಡಾ.ಶಮಾ ವಂದಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶೈಕ್ಷಣಿಕ ಸಂಸ್ಥೆಗಳ ಪ್ರಾಂಶುಪಾಲರುಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎಲ್ಲ ಶೈಕ್ಷಣಿಕ ಸಂಸ್ಥೆಗಳ ಪಥಸಂಚಲನ ನಡೆಯಿತು. ಬಳಿಕ ಕ್ರೀಡಾಕೂಟ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಂಸ್ಥೆಗಳ ಕ್ರೀಡಾ ದಿನಾಚರಣೆ ಸಮಾರೋಪ ಕ್ರೀಡೆ ಜೊತೆ ಶಿಕ್ಷಣ ಅತಿಮುಖ್ಯ ಎಂದು ಏಕಲವ್ಯ ಪ್ರಶಸ್ತಿ ಪುರಸ್ಕೃತ, ಅಂತರರಾಷ್ಟ್ರೀಯ ಕ್ರೀಡಾಪಟು, ಪೊಲೀಸ್ ಉಪ ನಿರೀಕ್ಷಕ ಅಭಿಷೇಕ ಎನ್. ಶೆಟ್ಟಿ ಹೇಳಿದರು. ನನ್ನ ಸಾಧನೆಯ ಹಿಂದೆ ಡಾ.ಎಂ.ಮೋಹನ ಆಳ್ವ ಅವರ ಕೊಡುಗೆ ಅಪಾರ. ಜೊತೆಗೆ ಮೂಡುಬಿದಿರೆಗೆ ಸಿಂಥೆಟಿಕ್ ಟ್ರ್ಯಾಕ್ ತಂದ ಡಾ.ಎಂ.ಮೋಹನ ಆಳ್ವ, ಮಾಜಿ ಸಚಿವ ಅಭಯಚಂದ್ರ ಜೈನ್, ಕ್ರೀಡೆ ಮತ್ತು ಶಿಕ್ಷಣದಲ್ಲಿ ನನ್ನನ್ನು ಬೆಳೆಸಿದ ಪ್ರಾಂಶುಪಾಲರು ಹಾಗೂ ಎಲ್ಲ ಶಿಕ್ಷಕರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಅಭಿಷೇಕ್ ಸಾಧನೆ ಎಲ್ಲರಿಗೂ ಮಾದರಿ ಎಂದರು.

ಆಳ್ವಾಸ್ ವಿದ್ಯಾರ್ಥಿಗಳು ಕ್ರೀಡೆ, ಶಿಕ್ಷಣದ ಜೊತೆ ವ್ಯಕ್ತಿತ್ವದಲ್ಲಿ ಯೂ ಮಾದರಿಯಾಗಿದ್ದಾರೆ ಎಂದರು. ಎಲ್ಲ ವಿದ್ಯಾರ್ಥಿ, ಶಿಕ್ಷಕರು ಹಾಗೂ ಪ್ರಾಂಶುಪಾಲರಿಗೆ ಕೃತಜ್ಞತೆ ಸಲ್ಲಿಸಿದರು. ರಾಮಕೃಷ್ಣ ಮಿಷನ್ನ ಸ್ವಚ್ಛ ಮನಸ್ಸನ ರಂಜನ್ ಬೆಳ್ಳರ್ಪಾಡಿ, ಪಂಚರತ್ನ ಇಂಟರ್ ನ್ಯಾಷನಲ್ ಹೋಟೆಲ್ ಮಾಲೀಕ ವಿನಯ್ ಶೆಟ್ಟಿ, ಬಿಮಾಲ್ ಇನ್ಫ್ರಾಸ್ಟçಕ್ಚರ್ ಮಾಲೀಕ ಪ್ರವೀಣ್ ಕುಮಾರ್ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶೈಕ್ಷಣಿಕ ಸಂಸ್ಥೆಗಳ ಪ್ರಾಂಶುಪಾಲರುಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು. ಮಂಗಳೂರು ವಿಶ್ವವಿದ್ಯಾಲಯ, ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ಕಾನೂನು ವಿಶ್ವ ವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಂಸ್ಥೆಗಳ ಕ್ರೀಡಾಕೂಟ ನಡೆಯಿತು. ಪ್ರಾಧ್ಯಾಪಕರಾದ ಡಾ.ಯೋಗೀಶ್ ಕೈರೋಡಿ ಹಾಗೂ ರಾಜೇಶ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.